ಬಾಲಿವುಡ್

ಹೊರಬಿತ್ತು ಸುಶಾಂತ್ ಸಿಂಗ್ ರಜಪೂತ್ ಮರಣೋತ್ತರ ಪರೀಕ್ಷೆ ವರದಿ: ವರದಿಯಲ್ಲೇನಿದೆ?

ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ.

ಹೊರಬಿತ್ತು ಸುಶಾಂತ್ ಸಿಂಗ್ ರಜಪೂತ್ ಮರಣೋತ್ತರ ಪರೀಕ್ಷೆ ವರದಿ: ವರದಿಯಲ್ಲೇನಿದೆ?
ಸುಶಾಂತ್ ಸಿಂಗ್ ರಜಪೂತ್
Published On :

ಮುಂಬಯಿ: ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ. 

34 ವರ್ಷದ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ಗೊತ್ತಾಗಿತ್ತು.  ಆತ್ಮಹತ್ಯೆ ಮಾಡಿಕೊಂಡಿದ್ದ ಸುಶಾಂತ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿತ್ತು. ಇನ್ನು ಇದು ಯಾರಾದರೂ ಮಾಡಿದ ಹತ್ಯೆ ಇರಬಹುದೇ ಎನ್ನುವ ಅನುಮಾನ ಕೂಡ ಕಾಡಿತ್ತು.

ಈಗ ಮರಣೋತ್ತರ ಪರೀಕ್ಷೆ ವರದಿ ಬಂದಿದೆ. ನೇಣು ಬಿಗಿದುಕೊಂಡ ಕಾರಣಕ್ಕೇ ಸುಶಾಂತ್ ಮರಣ ಹೊಂದಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಇರಲಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್​ನಲ್ಲಿ ಹೇಳಲಾಗಿದೆ.

ಸುಶಾಂತ್ ಸಿಂಗ್ ತಂದೆ ಹಾಗೂ ಕುಟುಂಬಸ್ಥರು ಪಾಟ್ನಾದಿಂದ ಇಂದು ಮುಂಬೈಗೆ ಆಗಮಿಸಿದ ನಂತರ ಅಂತ್ಯ ಸಂಸ್ಕಾರ ನಡೆಯಲಿದೆ, ಸುಶಾಂತ್ ಅವರ ಕೆಲವು ಅಂಗಾಂಗಗಳನ್ನು ಜೆಜೆ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪರೀಕ್ಷೆಗಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.