ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು
ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಿಹಾರ ಮೂಲಕ ಸುಧೀರ್ ಕುಮಾರ್ ಓಜಾ ಎಂಬುವವರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ 306, 109, 504 & 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಓಝಾ ಅವರು, ಸುಶಾಂಕ್ ಅವರನ್ನು 7 ಸಿನಿಮಾಗಳಿಂದ ಕೈಬಿಡಲಾಗಿತ್ತು. ಅಲ್ಲದೆ, ಕೆಲ ಸಿನಿಮಾಗಳು ಕೂಡ ಬಿಡುಗಡೆಗೊಂಡಿರಲಿಲ್ಲ. ಇಂತಹ ಪರಿಸ್ಥಿತಿಗಳಿಂದಾಗಿ ನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


