'ಆತ್ಮನಿರ್ಭರ್' ಆಗುವುದಾಗಿ ಪ್ರತಿಜ್ಞೆ ಮಾಡಿ, ಚೀನಾ ಉತ್ಪನ್ನ ಬಹಿಷ್ಕರಿಸಿ: ಕ್ವೀನ್ ಕಂಗನಾ ಕರೆ
ಇತ್ತೀಚಿಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಮಲ್ಲಯುದ್ಧದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಸಹ ಕೈ ಜೋಡಿಸಿದ್ದಾರೆ.

ನವದೆಹಲಿ: ಇತ್ತೀಚಿಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಮಲ್ಲಯುದ್ಧದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಸಹ ಕೈ ಜೋಡಿಸಿದ್ದಾರೆ.
ಈ ಕುರಿತು ಸುಮಾರು ಎರಡು ನಿಮಿಷಗಳ ವಿಡಿಯೋ ಹಂಚಿಕೊಂಡಿರುವ ಕಂಗನಾ, ಚೀನಾ ಉತ್ಪನ್ನಗಳನ್ನು ಸಂಪೂರ್ಣ ಬಹಿಷ್ಕರಿಸುವ ಮೂಲಕ 'ಆತ್ಮನಿರ್ಭರ್'ರಾಗಿ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ಗಡಿಯಲ್ಲಿ ಭಾರತೀಯ ಸೈನಿಕರನ್ನು ಕೊಲ್ಲುತ್ತಿರುವ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಿ. ಅಲ್ಲಿ ಉತ್ಪಾದನೆಯಾದ ವಸ್ತುಗಳನ್ನು ಭಾರತದಲ್ಲಿ ಮಾರಿ, ಅದರಿಂದ ಬಂದ ಹಣದಿಂದ ಶಸ್ತ್ರಾಸ್ತ್ರಗಳನ್ನು ಕೊಂಡು ನಮ್ಮ ಸೈನಿಕರನ್ನೇ ಕೊಲ್ಲುತ್ತಾರೆ. ಇಂತಹ ದೇಶದಿಂದ ಬರುವ ಉತ್ಪನ್ನಗಳನ್ನು ಕೊಳ್ಳುವುದನ್ನು ನಿಲ್ಲಿಸೋಣ ಎಂದಿದ್ದಾರೆ.
"ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಆಂಗ್ಲರ ಆಡಳಿತ ಕೊನೆಗೊಳಿಸಲು ಮಹಾತ್ಮ ಗಾಂಧಿ ಅವರು ಬ್ರಿಟಿಷ್ ಸರಕುಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದನ್ನು ನಾವು ಮರೆತಿದ್ದೇವೆಯೇ? ಲಡಾಖ್ ಕೇವಲ ಒಂದು ತುಂಡು ಭೂಮಿಯಲ್ಲ. ಅದು ಅತ್ಯಂತ ಅವಶ್ಯಕವಾದ ಭಾರತದ ಭಾಗ. ಹೀಗಾಗಿ ಚೀನಾ ವಿರುದ್ಧದ ಯುದ್ಧದಲ್ಲಿ ನಾವೂ ಪಾಲ್ಗೊಳ್ಳುವುದು ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


