ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಶಾನೂ ಶರ್ಮಾ ವಿಚಾರಣೆ ನಡೆಸಿದ ಪೊಲೀಸರು
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸ್ತ್ರ ವಿನ್ಯಾಸಕ ನಿರ್ದೇಶಕಿ ಶಾನೂ ಶರ್ಮಾ ಅವರನ್ನು ಮುಂಬೈ ಪೊಲೀಸರು ಶನಿವಾರ ವಿಚಾರಣೆ ನಡೆಸಿದ್ದಾರೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸ್ತ್ರ ವಿನ್ಯಾಸಕ ನಿರ್ದೇಶಕಿ ಶಾನೂ ಶರ್ಮಾ ಅವರನ್ನು ಮುಂಬೈ ಪೊಲೀಸರು ಶನಿವಾರ ವಿಚಾರಣೆ ನಡೆಸಿದ್ದಾರೆ.
ಯಶ್ ರಾಜ್ ಫಿಲಂಸ್ ವಸ್ತ್ರ ವಿನ್ಯಾಸಕಿ ನಿರ್ದೇಶಕಿಯಾಗಿರುವ ಶಾನೂ ಶರ್ಮಾ ಅವರನ್ನು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ.ಸುಶಾಂತ್ ಸಿಂಗ್ ನೇಣು ಹಾಕಿಕೊಂಡು ಉಸಿರುಕಟ್ಟಿ ಸಾವನ್ನಪ್ಪಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.
ಅಂತಿಮ ವರದಿಯಲ್ಲಿ ಸಾವಿಗೂ ಮುಂಚಿತವಾಗಿ ಯಾವುದೇ ಹೋರಾಟದ ಲಕ್ಷಣಗಳು ಕಂಡುಬಂದಿಲ್ಲ, ಉಗುರುಗಳಲ್ಲಿಯೂ ಏನೂ ಆಗಿಲ್ಲ ಎಂದು ಐವರು ವೈದ್ಯರನ್ನೊಳಗೊಂಡ ತಂಡ ವರದಿಯನ್ನು ವಿಶ್ಲೇಷಿಸಿದೆ. ಪೊಲೀಸರು ಈಗ ಒಳಾಂಗಗಳ ವರದಿಗಾಗಿ ಕಾಯುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು 23 ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


