ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸಲು ಸಹಾಯವಾಣಿ ಆರಂಭಿಸಿದ ನಟ ಸೋನು ಸೂದ್
ಲಾಕ್ ಡೌನ್ ನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲು ಬಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆಯುತ್ತಿರುವ ಬಾಲಿವುಡ್ ನಟ ಸೋನು ಸೂದ್ ಅವರು, ಈಗ ಅವರ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ ಆರಂಭಿಸಿರುವುದಾಗಿ ಹೇಳಿದ್ದಾರೆ.

ಮುಂಬೈ: ಲಾಕ್ ಡೌನ್ ನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲು ಬಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆಯುತ್ತಿರುವ ಬಾಲಿವುಡ್ ನಟ ಸೋನು ಸೂದ್ ಅವರು, ಈಗ ಅವರ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ ಆರಂಭಿಸಿರುವುದಾಗಿ ಹೇಳಿದ್ದಾರೆ.
ತಮ್ಮ ತಮ್ಮ ಊರುಗಳಿಗೆ ತೆರಳಲು ಬಸ್ ಅಥವಾ ರೈಲು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ ವಲಸೆ ಕಾರ್ಮಿಕರು 18001213711 ಸಹಾಯವಾಣಿ ಮೂಲಕ ಸೋನು ಸೂದ್ ಅವರ ತಂಡವನ್ನು ಸಂಪರ್ಕಿಸಬಹುದು.
"ನನಗೆ ಸಾಕಷ್ಟು ಕರೆಗಳು ಬರುತ್ತಿದ್ದವು ... ಪ್ರತಿದಿನ ಸಾವಿರಾರು ಕರೆಗಳು. ನನ್ನ ಕುಟುಂಬ ಮತ್ತು ಸ್ನೇಹಿತರು ಡೇಟಾವನ್ನು ಸಂಗ್ರಹಿಸುವಲ್ಲಿ ನಿರತರಾಗಿದ್ದರು. ಆಗ ನಾವು ನಮ್ಮನ್ನು ಸಂಪರ್ಕಿಸಲು ಸಾಧ್ಯವಾಗದ ಬಹಳಷ್ಟು ಜನರನ್ನು ನಾವು ಕಳೆದುಕೊಳ್ಳಬಹುದು ಎಂದು ಅರಿತುಕೊಂಡು ಸಹಾಯವಾಣಿ ಆರಂಭಿಸಲು ನಿರ್ಧರಿಸಿದೆವು. ಇದು ಟೋಲ್-ಫ್ರೀ ನಂಬರ್ "ಎಂದು ಸೂದ್ ಹೇಳಿದ್ದಾರೆ.
ಲಾಕ್ ಡೌನ್ ನಿಂದಾಗಿ ಸಾವಿರಾರು ಕಾರ್ಮಿಕರು ನೂರಾರು ಕಿ.ಮೀ. ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಸೋನು ಸೂದ್ ಅವರು, ಕರ್ನಾಟಕ, ಬಿಹಾರ ಮತ್ತು ಜಾರ್ಖಂಡನ್ ನೂರಾರು ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


