ಚಾಲಕ, ಇತರೆ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್: ಕ್ವಾರಂಟೈನ್'ನಲ್ಲಿ ನಟ ಸಲ್ಮಾನ್ ಖಾನ್
ಚಾಲಕ ಹಾಗೂ ಇತರೆ ಇಬ್ಬರು ಸಿಬ್ಬಂದಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕ್ವಾರಂಟೈನ್'ಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮುಂಬೈ: ಚಾಲಕ ಹಾಗೂ ಇತರೆ ಇಬ್ಬರು ಸಿಬ್ಬಂದಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕ್ವಾರಂಟೈನ್'ಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಕೊರೋನಾ ಕಾಣಿಸಿಕೊಂಡಿರುವ ಸಲ್ಮಾನ್ ಖಾನ್ ಅವರ ಚಾಲಕ ಹಾಗೂ ಇತರೆ ಸಿಬ್ಬಂದಿಗಳು ಬಾಂಬೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸಿಬ್ಬಂದಿಗಳಲ್ಲಿ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲು ಮುಂಜಾಗ್ರತಾ ಕ್ರಮವಾಗಿ ಸಲ್ಮಾನ್ ಖಾನ್ ಅವರು ಮನೆಯಲ್ಲಿಯೇ ಕ್ವಾರಂಟೈನ್'ಗೊಳಗಾಗಿದ್ದಾರೆಂದು ವರದಿಗಳು ತಿಳಿಸಿವೆ.
ಈ ನಡುವೆ ಸಲ್ಮಾನ್ ಖಾನ್ ಅವರ ಕುಟುಂಬ ಸದಸ್ಯರೂ ಕೂಡ ಮನೆಯಲ್ಲಿಯೇ 14 ದಿನಗಳ ಕಾಲ ಐಸೋಲೇಷನ್ ನಲ್ಲಿರಲು ನಿರ್ಧರಿಸಿದ್ದಾರೆನ್ನಲಾಗಿದೆ.
ಸಲ್ಮಾನ್ ಖಾನ್ ಅವರು ಹಿಂದಿ ಆವೃತ್ತಿಯ ಬಿಗ್ ಬಾಸ್ 14 ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದರು. ವಾರಾಂತ್ಯದ ದಿನಗಳಲ್ಲಿ ಸ್ಪರ್ಧಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದರು. ಆದರೆ, ಇದೀಗ ಕ್ವಾರಂಟೈನ್'ಗೊಳಗಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಕರ ಮುಂದಿನ ನಡೆಯೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


