ಬಾಲಿವುಡ್

ಚಿತ್ರರಂಗಕ್ಕೆ ಗುಡ್ ಬೈ ಹೇಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸನಾ ಖಾನ್

ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ ಸನಾಖಾನ್ ಅವರು ಗುಜರಾತ್ ಮೂಲದ ಮುಫ್ತಿ ಅನಾಸ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚಿತ್ರರಂಗಕ್ಕೆ ಗುಡ್ ಬೈ ಹೇಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸನಾ ಖಾನ್
ಸನಾ ಖಾನ್
Published On :

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ ಸನಾಖಾನ್ ಅವರು ಗುಜರಾತ್ ಮೂಲದ ಮುಫ್ತಿ ಅನಾಸ್ ಎಂಬುವವರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಸನಾಖಾನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಫೋಟೋ ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಈ ನಡುವೆ ವಿವಾಹದ ಫೋಟೋಗಳನ್ನು ನಟಿ ಸನಾಖಾನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಫೋಟೋವನ್ನು ಹಂಚಿಕೊಂಡಿರುವ ಸನಾಖಾನ್ ಅವರು, ಅಲ್ಲಾರಿಂದ ಇಬ್ಬರೂ ಪ್ರೀತಿಸಿದೆವು. ಅಲ್ಲಾರಿಂದಾಗಿ ಮದುವೆಯಾದೆವು. ಈ ಜಗತ್ತಿನಲ್ಲಿ ಎಲ್ಲಾ ನಮ್ಮಿಬ್ಬರನ್ನೂ ಒಟ್ಟಾಗಿ ಇಡಲಿ ಎಂದು ಹೇಳಿಕೊಂಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದ ಸನಾಖಾನ್ ಅವರು, ಮಾನವೀಯತೆ ಮೇಲೆ ಕೆಲಸ ಮಾಡಿಕೊಂಡು, ಸೃಷ್ಟಿದಾತ ಹೇಳಿದ ನಿಯಮಗಳನ್ನು ಪಾಲಿಸುತ್ತೇನೆ. ನನಗೆ ಚಿತ್ರೋದ್ಯಮ ಹೆಸರು, ಹಣ, ಗೌರವ ಎಲ್ಲವನ್ನೂ ನೀಡಿದೆ. ಆದರೆ, ಮನುಷ್ಯ ಹೆಸರು, ಹಣ ಮಾಡಲು ಭೂಮಿಗೆ ಬರುವುದಾ? ನನಗೆ ಇದು ಗೊತ್ತಾಗಿದೆ. ಹೆಸರು, ಹಣಕ್ಕೋಸ್ಕರ ಇಡೀ ಜೀವನವನ್ನು ಕಳೆಯುವುದಲ್ಲ. ಹೀಗಾಗಿ ನಾನು ಬಣ್ಣದಲೋಕದಿಂದ ದೂರ ಹೋಗುವೆ ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.