ಬಾಲಿವುಡ್

ಎಫ್‍ಐಆರ್ ರದ್ದತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಕಂಗನಾ, ರಂಗೋಲಿ

ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಎಫ್‍ಐಆರ್ ರದ್ದತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಕಂಗನಾ, ರಂಗೋಲಿ
ರಂಗೋಲಿ-ಕಂಗನಾ ರಣಾವತ್
Published On :

ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕೋಮು ಉದ್ವೇಗವನ್ನು ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸೋಮವಾರ ಹಾಗೂ ಮಂಗಳವಾರ ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. 

ಅಕ್ಟೋಬರ್ 26, 27 ಮತ್ತು ನವೆಂಬರ್ 9 ಹಾಗೂ 10 ರಂದು ಸಹೋದರಿಯರನ್ನು ಎರಡು ಬಾರಿ ಹಾಜರಾಗಲು ಸೂಚಿಸಲಾಗಿತ್ತಾದರೂ, ಅವರು ಪೊಲೀಸರ ಮುಂದೆ ಹಾಜರಾಗಿರಲಿಲ್ಲ. 

ನವೆಂಬರ್ 15 ರವರೆಗೆ ಹಿಮಾಚಲ ಪ್ರದೇಶದಲ್ಲಿ ತಮ್ಮ ಸಹೋದರನ ವಿವಾಹದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಅವರು ತಮ್ಮ ವಕೀಲರ ಮೂಲಕ ತಿಳಿಸಿದ್ದರು. 

ಸೋದರಿಯರ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯವು ಬಾಂದ್ರಾ ಪೊಲೀಸರಿಗೆ ನಿರ್ದೇಶನ ನೀಡಿತ್ತು, ನಂತರ ಪೊಲೀಸರು ಕಂಗನಾ ಹಾಗೂ ರಂಗೋಲಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.