ಬಾಲಿವುಡ್

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್
ಅನುರಾಗ್ ಕಶ್ಯಪ್
Published On :

ನವದೆಹಲಿ: ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

2013ರಲ್ಲಿ ತಮ್ಮ ಮೇಲೆ ನಿರ್ದೇಶಕ ಅನುರಾಗ್ ಕಶ್ಯಪ್ ರೇಪ್ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈಯ ವರ್ಸೊವಾ ಪೊಲೀಸ್ ಠಾಣೆಯಲ್ಲಿ ಪೊಲೀಸರು ನಿರ್ದೇಶಕರನ್ನು ನಿನ್ನೆ ವಿಚಾರಣೆಗೆ ಕರೆದಿದ್ದರು.

2013ರ ಆಗಸ್ಟ್ ತಿಂಗಳಿಡೀ ನಿರ್ದೇಶಕ ಕಶ್ಯಪ್ ಶ್ರೀಲಂಕಾದಲ್ಲಿ ಚಿತ್ರವೊಂದರ ಶೂಟಿಂಗ್ ನಿಮಿತ್ತ ಇದ್ದರು. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಅವರು ನೀಡಿದ್ದಾರೆ. ನಟಿಯ ಮೇಲೆ ಮನೆಯಲ್ಲಿ ಅತ್ಯಾಚಾರ ಮಾಡಿದ್ದರು ಎಂಬ ಆರೋಪವನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ ಎಂದು ಅನುರಾಗ್ ಕಶ್ಯಪ್ ಅವರ ಪರವಾಗಿ ವಾದ ಮಂಡಿಸುತ್ತಿರುವ ವಕೀಲೆ ಪ್ರಿಯಾಂಕ ಖಿಮನಿ ಹೇಳಿದ್ದಾರೆ.

ತಮ್ಮ ವಿರುದ್ಧ ಸುಖಾಸುಮ್ಮನೆ ನಿಂದಿಸಲು ಇಷ್ಟು ವರ್ಷಗಳು ಕಳೆದ ನಂತರ ನಟಿ ಪಾಯಲ್ ಘೋಷ್ ಆರೋಪ ಮಾಡುತ್ತಿದ್ದಾರೆ. ಎಫ್ ಐಆರ್ ನಲ್ಲಿ ಒಂದು ರೀತಿ ಆರೋಪಿಸಿದ್ದು, ಇನ್ನು ತನಿಖೆ ವೇಳೆ ಮತ್ತೊಂದು ರೀತಿಯಲ್ಲಿ ಆರೋಪ ಮಾಡುವ ಸಾಧ್ಯತೆಯಿದೆ ಎಂದು ಕಶ್ಯಪ್ ಪರ ವಕೀಲೆ ಹೇಳಿದ್ದಾರೆ.

ನಟಿ ಮಾಡಿರುವ ಸುಳ್ಳು ಆರೋಪದಿಂದ ತಮ್ಮ ಮತ್ತು ತಮ್ಮ ಕುಟುಂಬಕ್ಕೆ ತೀವ್ರ ನೋವಾಗಿದ್ದು, ಅಪರಾಧ ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಮಿಟೂ ಅಭಿಯಾನವನ್ನು ತಮ್ಮ ದುರುದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ ಎಂದು ಅನುರಾಗ್ ಕಶ್ಯಪ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.