ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಟಬು, ತಾಪ್ಸಿ, ಅನುಷ್ಕಾಗೆ ಸ್ಥಾನ
ಆನ್ ಲೈನ್ ಹುಡುಕಾಟದಲ್ಲಿ ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಬಾಲಿವುಡ್ ತಾರೆಗಳಾದ ಟಬು, ತಾಪ್ಸೀ ಪನ್ನು, ಅನುಷ್ಕಾ ಶರ್ಮಾ ಮತ್ತು ಸೋನಾಕ್ಷಿ ಸಿನ್ಹಾ ಸ್ಥಾನ ಪಡೆದಿದ್ದಾರೆ. ಆದರೆ, ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮೊದಲ ಸ್ಥಾನದಲ್ಲಿದ್ದಾರೆ.

ನವದೆಹಲಿ: ಆನ್ ಲೈನ್ ಹುಡುಕಾಟದಲ್ಲಿ ದೇಶದ ಅತ್ಯಂತ ಅಪಾಯಕಾರಿ ಸೆಲೆಬ್ರಿಟಿಗಳ ಟಾಪ್ 10 ಪಟ್ಟಿಯಲ್ಲಿ ಬಾಲಿವುಡ್ ತಾರೆಗಳಾದ ಟಬು, ತಾಪ್ಸೀ ಪನ್ನು, ಅನುಷ್ಕಾ ಶರ್ಮಾ ಮತ್ತು ಸೋನಾಕ್ಷಿ ಸಿನ್ಹಾ ಸ್ಥಾನ ಪಡೆದಿದ್ದಾರೆ. ಆದರೆ,ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಜಗತ್ತಿನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಟಬು ನಂಬರ್ 2 ಸ್ಥಾನದಲ್ಲಿದ್ದು, ತಾಪ್ಸಿ ಪನ್ನು 3, ನಟ ನಿರ್ಮಾಪಕ ಶರ್ಮಾ 4 ಹಾಗೂ ಸಿನ್ಹಾ 5ನೇ ಸ್ಥಾನದಲ್ಲಿದ್ದಾರೆ. ಗಾಯಕ ಅರ್ಮಾನ್ ಮಲ್ಲಿಕ್ 6, ನಟಿ ಸಾರಾ ಅಲಿಖಾನ್ 7 ಧಾರವಾಹಿ ಸ್ಟಾರ್ ದಿವ್ಯಾಂಕ ತ್ರಿಪಾಠಿ 8ನೇ ಸ್ಥಾನದಲ್ಲಿದ್ದಾರೆ. ಸೂಪರ್ ಸ್ಟಾರ್ ಶಾರೂಖ್ ಖಾನ್ 9, ಹಿನ್ನೆಲೆ ಗಾಯಕ ಅರ್ಜಿತ್ ಸಿಂಗ್ 10ನೇ ಸ್ಥಾನದಲ್ಲಿದ್ದಾರೆ.
ದುರುದ್ದೇಶ ಪೂರಿತ ವೆಬ್ ಸೈಟ್ ಗಳು ಮತ್ತು ವೈರಸ್ ನಂಟಿನಿಂದ ಈ ತಾರೆಯರ ಹೆಸರುಗಳು ಅಗ್ರಸ್ಥಾನದಲ್ಲಿರುವುದಾಗಿ ಪಟ್ಟಿಯನ್ನು ಬಿಡುಗಡೆ ಮಾಡಿರುವ ಸೈಬರ್ ಸೆಕ್ಯುರಿಟಿ ಕಂಪನಿಯೊಂದು ಮಂಗಳವಾರ ತಿಳಿಸಿದೆ.
ಗ್ರಾಹಕರು ಎಂದೆಂದಿಗಿಂತಲೂ ಈಗ ಉಚಿತ ಮನರಂಜನೆಗಾಗಿ ವೆಬ್ ಜಾಲಡುತ್ತಿದ್ದು, ಇದನ್ನೇ ಸೈಬರ್ ಅಪರಾಧಿಗಳು ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು Mcafee ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ವೆಂಕಟ್ ಕೃಷ್ಣಾಪುರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


