ರಣವೀರ್, ರಣಬೀರ್, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ಮಾಡಿಸಿಕೊಳ್ಳಲಿ: ಕಂಗನಾ ರನೌತ್
ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ಮುಂಬೈ: ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.
ಸೆಲೆಬ್ರಿಟಿಗಳು ಡ್ರಗ್ಸ್ ಸೇವಿಸುವ ಬಗ್ಗೆ ನಟಿ ಕಂಗನಾ ರನೌತ್ ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತನಾಡಿ, ಬಾಲಿವುಡ್ ನ ಅನೇಕ ನಟರು ಡ್ರಗ್ಸ್ ಸೇವನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಶೇ 99ರಷ್ಟು ಬಾಲಿವುಡ್ ನ ಖ್ಯಾತ ನಟರು ಮಾದಕ ದ್ರವ್ಯ ವ್ಯಸನಿಗಳಾಗಿದ್ದಾರೆ, ತನಿಖೆ ನಡೆಸಿದರೆ ಅನೇಕರ ಹೆಸರುಗಳು ಹೊರಬರುತ್ತೆ ಎಂದು ಆರೋಪಿಸಿದ್ದರು.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕಂಗನಾ ಬಾಲಿವುಡ್ ನಲ್ಲಿ ಯಾರೆಲ್ಲ ಡ್ರಗ್ಸ್ ಸೇವಿಸುತ್ತಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಹಲವು ನಟರು ರಕ್ತ ಪರೀಕ್ಷೆಗೆ ಒಳಗಾಗಬೇಕು, ಈ ಮೂಲಕ ತಮ್ಮ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
''ರಣ್ವೀರ್ ಸಿಂಗ್, ರಣ್ಬೀರ್ ಕಪೂರ್, ಅಯಾನ್ ಮುಖರ್ಜಿ, ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿ ನೀಡುವಂತೆ ಕೇಳಿಕೊಳ್ಳುತ್ತೇನೆ. ಅವರು ಕೊಕೇನ್ ವ್ಯಸನಿಗಳೆಂದು ವದಂತಿಗಳಿವೆ. ಈ ವದಂತಿಗಳಿಗೆ ಸ್ಪಷ್ಟನೆ ನೀಡಬೇಕು. ವ್ಯಸನಿಗಳು ಅಲ್ಲ ಎಂದು ಸಾಬೀತಾದರೆ ಲಕ್ಷಾಂತರ ಜನರನ್ನು ಪ್ರೇರೇಪಿಸಬಹುದು." ಎಂದು ಟ್ವೀಟ್ ಮಾಡಿ ಪ್ರಧಾನಮಂತ್ರಿ ಕಚೇರಿ ಖಾತೆಗೆ ಟ್ಯಾಗ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


