ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಡ್ರಗ್ ಡೀಲರ್ ಅರೆಸ್ಟ್
ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಡೀಲರ್ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಡೀಲರ್ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಬಂಧಿತನನ್ನು ಜೈದ್ ವಿಲ್ಲಾತ್ರಾ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ನಡೆಯುವ ಐಶಾರಾಮಿ ಪಾರ್ಟಿಗಳಿಗೆ ಗಾಂಜಾ ಸೇರಿದಂತೆ ಇತರ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಉತ್ತಮ ಗುಣಮಟ್ಟದ ಗಾಂಜಾವನ್ನು ಗ್ರಾಂಗೆ 5 ಸಾವಿರದಂತೆ ಮಾರುತ್ತಿದ್ದ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಿವುಡ್ ನಟ ಸುಶಾಂತ್ಸಿಂಗ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ ಮಾದಕವಸ್ತು ಪ್ರಕರಣದ ವಿಚಾರಣೆ ವೇಳೆ ದೊರೆತ ಪ್ರಮುಖ ಮಾಹಿತಿಗಳನ್ನು ಆಧರಿಸಿ ಈತನನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ಹೇಳಿದ್ದಾರೆ.
ಮುಂಬೈ ಮಹಾನಗರದ ಪಶ್ಚಿಮ ಭಾಗದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಳೆದವಾರ ಎನ್ಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


