ರಿಯಾ ದೂರಿನ ಆಧಾರದಲ್ಲಿ ಸುಶಾಂತ್ ಸಹೋದರಿ ವಿರುದ್ಧ ಎಫ್ಐಆರ್
ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ನೀಡಿರುವ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜ್ಪೂತ್ ಅವರ ಸಹಹೋದರಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ನೀಡಿರುವ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜ್ಪೂತ್ ಅವರ ಸಹಹೋದರಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸುಶಾಂತ್ ಗೆ ಸಹೋದರಿಯರಾದ ಪ್ರಿಯಾಂಕ ಸಿಂಗ್ ಹಾಗೂ ಮೀತು ಸಿಂಗ್ ಇಬ್ಬರೂ ದೆಹಲಿ ಮೂಲದ ವೈದ್ಯ ತರುಣ್ ಕುಮಾರ್ ನ ಸಹಾಯದಿಂದ ವೈದ್ಯರು ಅಧಿಕೃತವಾಗಿ ಸೂಚಿಸದೇ ಇದ್ದರೂ ಔಷಧಗಳನ್ನು ನೀಡುತ್ತಿದ್ದರು ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದಾರೆ.
ಐಪಿಸಿ ಸೆಕ್ಷನ್ ಹಾಗೂ ನಾರ್ಕೊಟಿಕ್ ಡ್ರಗ್ಸ್ ಹಾಗೂ ಸೈಕೋಟ್ರೊಫಿಕ್ ಸಬ್ಸ್ಟೆನ್ಸ್ ಕಾಯ್ದೆಯಡಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಆರೋಪದಡಿ ಪ್ರಿಯಾಂಕ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದೂ ಆರೋಪಿಸಿದ್ದಾರೆ. ಆತಂಕ, ಅಶಾಂತಿಗೆ ಚಿಕಿತ್ಸೆಗೆ ವೈದ್ಯರು ನೀಡುವ ಔಷಧ ಚೀಟಿಯ ನಕಲನ್ನು ತಯಾರಿಸಿದ್ದರು ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


