ಎನ್ ಸಿಬಿ ಎದುರು ಸತ್ಯ ಒಪ್ಪಿಕೊಂಡ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ
ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಎನ್ ಸಿಬಿ ( ನ್ಯಾಷನಲ್ ಕ್ರೈಮ್ ಬ್ಯೂರೋ) ಎದುರು ಸತ್ಯ ಒಪ್ಪಿಕೊಂಡಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಎನ್ ಸಿಬಿ ( ನ್ಯಾಷನಲ್ ಕ್ರೈಮ್ ಬ್ಯೂರೋ) ಎದುರು ಸತ್ಯ ಒಪ್ಪಿಕೊಂಡಿದ್ದಾರೆ.
ಎನ್ ಸಿಬಿ ವಿಚಾರಣೆ ಸಂದರ್ಭದಲ್ಲಿ ಸತ್ಯ ಒಪ್ಪಿಕೊಂಡಿರುವ ರಿಯಾ ಚಕ್ರವರ್ತಿ, ತಾವು ಸುಶಾಂತ್ ಸಿಂಗ್ ರಜ್ಪೂತ್ ಜೊತೆ ಗಾಂಜಾ ತುಂಬಿಸಿದ್ದ ಸಿಗರೇಟ್ ನ್ನು ಸೇದುತ್ತಿದ್ದೆ ಎಂದು ಹೇಳಿದ್ದಾರೆ.
2016 ರಿಂದ ಸುಶಾಂತ್ ಸಹ ಡ್ರಗ್ಸ್ ಸೇವಿಸುತ್ತಿದ್ದರು ಎಂಬ ಅಘಾತಕಾರಿ ಅಂಶವನ್ನೂ ರಿಯಾ ಎನ್ ಸಿಬಿ ಎದುರು ಬಹಿರಂಗಪಡಿಸಿದ್ದಾರೆ. ರಿಯಾ ಚಕ್ರವರ್ತಿ ಮನೆಯಿಂದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ.
ಸುಶಾಂತ್ ಸಾವಿನ ಜತೆ ಡ್ರಗ್ಸ್ ನಂಟು ಥಳುಕು ಹಾಕಿಕೊಂಡಿದ್ದು ಎನ್ಸಿಬಿ ತನಿಖೆ ನಡೆಸುತ್ತಿದೆ. ಪರಿಣಾಮ ಈಗಾಗಲೇ ಹಲವು ಡ್ರಗ್ ಪೆಡ್ಲರ್ಗಳ ಹೆಸರು ಹೊರಬಿದ್ದಿದೆ. ಆದರೆ ಡ್ರಗ್ಸ್ ಗೆ ಸಂಬಂಧಿಸಿದಂತೆ ಇದುವರೆಗೂ ಸತ್ಯ ಒಪ್ಪದಿದ್ದ ರಿಯಾ ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


