ಬಾಲಿವುಡ್

ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿಗೆ ಸೆ.22ರ ವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾ

ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆತನ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರನ್ನು ಸ್ಥಳೀಯ ಕೋರ್ಟ್ ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿಗೆ ಸೆ.22ರ ವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾ
ರಿಯಾ
Published On :

ಮುಂಬೈ: ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆತನ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರನ್ನು ಸ್ಥಳೀಯ ಕೋರ್ಟ್ ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್ ಸಿ ಬಿ) ರಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಇಂದು  ನಟಿಯನ್ನು ಬಂಧಿಸಿತ್ತು. ಬಳಿಕ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. 

ರಿಯಾ ಚಕ್ರವರ್ತಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದೇ ವೇಳೆ ಜಾಮೀನು ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ನಟಿ ರಿಯಾ ಡ್ರಗ್ಸ್ ಮಾಫಿಯಾ ಜತೆ ನಂಟು ಹೊಂದಿದ್ದು, ತನ್ನ ಗೆಳೆಯ ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಸಂಗ್ರಹಿಸಿದ್ದಳು ಎಂದು ಎನ್ ಸಿಬಿ ಆರೋಪಿಸಿದೆ. ಆದರೆ ಆರೋಪಿಯನ್ನು ತಾನು ಈಗಾಗಲೇ ವಿಚಾರಣೆ ನಡೆಸಿದ್ದು, ತನ್ನ ವಶಕ್ಕೆ ಪಡೆಯುವ ಅಗತ್ಯ ಇಲ್ಲ ಎಂದು ಕೋರ್ಟ್ ಗೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.