ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ.
ಪ್ರಕರಣ ಸಂಬಂಧ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಯನ್ನು ಎನ್ಸಿಬಿ ಅಧಿಕಾರಿಗಳು ಕಳೆದ ವಾರ ಬಂಧಿಸಿದ್ದರು. ಇದೀಗ ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ಇದೀಗ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ.
ಎನ್ ಸಿಬಿ ವಿಚಾರಣೆ ಸಂದರ್ಭದಲ್ಲಿ ಸತ್ಯ ಒಪ್ಪಿಕೊಂಡಿರುವ ರಿಯಾ ಚಕ್ರವರ್ತಿ, ತಾವು ಸುಶಾಂತ್ ಸಿಂಗ್ ರಜ್ಪೂತ್ ಜೊತೆ ಗಾಂಜಾ ತುಂಬಿಸಿದ್ದ ಸಿಗರೇಟ್ ನ್ನು ಸೇದುತ್ತಿದ್ದೆ ಎಂದು ಹೇಳಿದ್ದಾರೆ.
2016 ರಿಂದ ಸುಶಾಂತ್ ಸಹ ಡ್ರಗ್ಸ್ ಸೇವಿಸುತ್ತಿದ್ದರು ಎಂಬ ಅಘಾತಕಾರಿ ಅಂಶವನ್ನೂ ರಿಯಾ ಎನ್ ಸಿಬಿ ಎದುರು ಬಹಿರಂಗಪಡಿಸಿದ್ದಾರೆ.
ಸುಶಾಂತ್ ಸಾವಿನ ಜತೆ ಡ್ರಗ್ಸ್ ನಂಟು ಥಳುಕು ಹಾಕಿಕೊಂಡಿತ್ತು. ಹೀಗಾಗಿ ಎನ್ಸಿಬಿ ತನಿಖೆ ನಡೆಸುತ್ತಿದೆ. ಪರಿಣಾಮ ಈಗಾಗಲೇ ಹಲವು ಡ್ರಗ್ ಪೆಡ್ಲರ್ಗಳು ಬಂಧಿಸಿದೆ. ಆದರೆ ಡ್ರಗ್ಸ್ ಗೆ ಸಂಬಂಧಿಸಿದಂತೆ ಇದುವರೆಗೂ ಸತ್ಯ ಒಪ್ಪದಿದ್ದ ರಿಯಾ ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


