ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿಗೆ ಮುಂಚೆ 100 ಸಂಖ್ಯೆಗೆ ಕರೆ ಮಾಡಿರಲಿಲ್ಲ: ಮುಂಬೈ ಪೊಲೀಸ್
ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಪೊಲೀಸ್ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿದ್ದರು ಎಂಬ ವದಂತಿ ಬಗ್ಗೆ ಮುಂಬೈ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ.

ಮುಂಬೈ: ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಪೊಲೀಸ್ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿದ್ದರು ಎಂಬ ವದಂತಿ ಬಗ್ಗೆ ಮುಂಬೈ ಪೊಲೀಸರೇ ಸ್ಪಷ್ಟನೆ ನೀಡಿದ್ದಾರೆ.
ಆಕೆ ಕೊನೆಯ ಬಾರಿಗೆ ತನ್ನ ಸ್ನೇಹಿತೆ ಅಂಕಿತಾಗೆ ಕರೆ ಮಾಡಿದ್ದರೇ ಹೊರತು ಪೊಲೀಸ್ ಗೆ ಅಲ್ಲ. ಕೊನೆಯ ಬಾರಿಗೆ ಪೊಲೀಸ್ ತುರ್ತು ಸಂಖ್ಯೆ 100ಕ್ಕೆ ಕರೆ ಮಾಡಿದ್ದರು ಎನ್ನುವುದು ಸುಳ್ಳು ಸುದ್ದಿ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ದಿಶಾ ಸಾಲಿಯಾನ್ ಮುಂಬೈಯ ತಮ್ಮ ನಿವಾಸದಲ್ಲಿ ಜೂನ್ 8ರಂದು ಮೃತಪಟ್ಟಿದ್ದರೆ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮೃತಪಟ್ಟಿದ್ದರು. ಆಕೆ ಮೃತಪಟ್ಟ ನಂತರ ಹೋಗಿ ನೋಡುವಾಗ ಮೃತದೇಹ ನಗ್ನವಾಗಿತ್ತು ಎಂಬ ಸುದ್ದಿಯನ್ನು ಕೂಡ ಪೊಲೀಸರು ಅಲ್ಲಗಳೆದಿದ್ದಾರೆ. ಆಕೆಯ ಸಾವಿನ ಬಗ್ಗೆ ಇಲ್ಲಸಲ್ಲದ ವದಂತಿ ಹಬ್ಬಿಸುತ್ತಿದ್ದಾರೆ ಎಂದು ದಿಶಾಳ ತಂದೆ ಮಾಲ್ವನಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


