ಡ್ರಗ್ಸ್ ಪ್ರಕರಣ: ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿಗೆ 7 ದಿನಗಳ ಪೊಲೀಸ್ ಕಸ್ಟಡಿ
ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಂಗಳೂರು: ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ಪೊಲೀಸರು ವಶಕ್ಕೆ ತೆಗೆದುಕೊಂಡರು. ಇಬ್ಬರನ್ನೂ ಭಾನುವಾರ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಮವಾರ ಫಲಿತಾಂಶ ನಿರೀಕ್ಷಿಸಲಾಗಿದೆ. ಫಲಿತಾಂಶವನ್ನು ಪಡೆಯುವವರೆಗೆ, ಪೊಲೀಸ್ ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆಯನ್ನು ಪುನರಾರಂಭಿಸಲು ಸಾಧ್ಯವಾಗುವುದಿಲ್ಲ. ಫಲಿತಾಂಶವು ನೆಗೆಟಿವ್ ಆಗಿದ್ದರೆ ಅವರು ತಮ್ಮ ವಿಚಾರಣೆಯನ್ನು ಪ್ರಾರಂಭಿಸಬಹುದು ಮತ್ತು ಅವರು ಪಾಸಿಟಿವ್ ವರದಿ ಪಡೆದರೆ ಸರ್ಕಾರದ ಮಾನದಂಡಗಳ ಪ್ರಕಾರ ಚಿಕಿತ್ಸೆಯನ್ನು ಒದಗಿಸಬೇಕಾಗುತ್ತದೆ.
ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಕಿಶೋರ್ ಸ್ವತಃ ಮಾದಕ ವ್ಯಸನಿಯಾಗಿದ್ದರೂ, ಅವರು ಇತ್ತೀಚೆಗೆ ಮಾದಕವಸ್ತು ವ್ಯವಹಾರವನ್ನು ಪ್ರಾರಂಭಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅವರು ಡ್ಯಾನ್ಸರ್ ಆಗಿ ಮಾತ್ರವಲ್ಲ ಬಾಲಿವಿಡ್ ಚಿತ್ರಗಳಲ್ಲಿ ನಟರಾಗಿ ಸಹ ಗುರುತಿಸಿಕೊಂಡಿದ್ದಾರೆ.
ಕೆಲವು ತಿಂಗಳ ಹಿಂದೆ ನಗರಕ್ಕೆ ಮರಳಿದ್ದ ಕಿಶೋರ್ ಅವರ ಕುಟುಂಬವು ಕುಳಾಯಿಗುಡ್ಡೆಯ ಸಣ್ಣ ಹೆಂಚುಗಳ ಮನೆಯಲ್ಲಿ ವಾಸಿಸುತ್ತಿದೆ. ಕೊರೋನಾವೈಅರಸ್ -ಪ್ರೇರಿತ ಲಾಕ್‌ಡೌನ್ ನಂತರ ಕಿಶೋರ್ ತೀವ್ರ ಆರ್ಥಿಕ ಸಮಸ್ಯೆಯನ್ನು ಎದುರಿಸಿದರು ಮತ್ತು ಆದ್ದರಿಂದ ಡ್ರಗ್ಸ್ ವ್ಯಾಪಾರದಲ್ಲಿ ತೊಡಗಿದ್ದಾಗಿ ಅವರು ಹೇಳಿದ್ದಾರೆ. ತಾನು ಮುಂಬೈಯಲ್ಲಿ ಬೀಡುಬಿಟ್ಟಿದ್ದ ತನ್ನ ಸ್ನೇಹಿತರ ಗುಂಪಿನ ಮೂಲಕ ಮುಂಬೈಯಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದದ್ದಾಗಿ ಆತ ಒಪ್ಪಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


