ಬಾಲಿವುಡ್

ನಾನು ಡ್ರಗ್ಸ್ ಸೇವನೆ ಮಾಡುವುದಿಲ್ಲ, ಅದರ ಬಳಕೆಗೆ ಪ್ರೋತ್ಸಾಹ ನೀಡುವುದೂ ಇಲ್ಲ: ಕರಣ್ ಜೋಹರ್

ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಪಾರ್ಟಿ ವೇಳೆ ಡ್ರಗ್ಸ್ ಸೇವನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಹೇಳಿಕೆಯನ್ನು ನೀಡಿದ್ದಾರೆ.

ನಾನು ಡ್ರಗ್ಸ್ ಸೇವನೆ ಮಾಡುವುದಿಲ್ಲ, ಅದರ ಬಳಕೆಗೆ ಪ್ರೋತ್ಸಾಹ ನೀಡುವುದೂ ಇಲ್ಲ: ಕರಣ್ ಜೋಹರ್
ಕರಣಿ್ ಜೋಹರ್
Published On :

ಮುಂಬೈ: ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಪಾರ್ಟಿ ವೇಳೆ ಡ್ರಗ್ಸ್ ಸೇವನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಹೇಳಿಕೆಯನ್ನು ನೀಡಿದ್ದಾರೆ.

ಕೆಲವು ಸುದ್ದಿವಾಹಿನಿಗಳು, ಮುದ್ರಣ ಮತ್ತು ಎಲೆಕ್ಟ್ರಾನಿಕ್ಸ್ ಮಾಧ್ಯಮಗಳು, ಸೋಷಿಯಲ್ ಮಾಧ್ಯಮಗಳಲ್ಲಿ ಕಳೆದ ವರ್ಷ ಜುಲೈ 28ರಂದು ತಮ್ಮ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಯಲ್ಲಿ ನಾರ್ಕೊಟಿಕ್ಸ್ ಡ್ರಗ್ಸ್ ಸೇವನೆ ಮಾಡಿದ್ದೆವು ಎಂದು ವರದಿ ಮಾಡುತ್ತಿವೆ. ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ಬಂದಿರುವ ಸುದ್ದಿಗಳು ಸುಳ್ಳು. ಈ ಬಗ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಡ್ರಗ್ಸ್ ಆರೋಪದಲ್ಲಿ ಮತ್ತೆ ನನ್ನ ಹೆಸರು, ನನ್ನ ಮನೆಯಲ್ಲಿ ಆಯೋಜಿಸಿದ ಪಾರ್ಟಿಯ ಬಗ್ಗೆ ಕೇಳಿ ಬರುತ್ತಿದ್ದು ಇವು ಸಂಪೂರ್ಣವಾಗಿ ಆಧಾರರಹಿತ ಮತ್ತು ಸುಳ್ಳು ಎಂದು ಹೇಳಲು ಬಯಸುತ್ತೇನೆ, ನನ್ನ ಮನೆಯಲ್ಲಿ ಆದ ಪಾರ್ಟಿಯಲ್ಲಿ ನಾರ್ಕೊಟಿಕ್ಸ್ ಬಳಕೆ ಮಾಡಲಿಲ್ಲ, ಅಂತವುಗಳಿಗೆ ನಾನು ಪ್ರೋತ್ಸಾಹ ಕೂಡ ನೀಡುವುದಿಲ್ಲ ಎಂದು ಕರಣ್ ಜೋಹರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂತಹ ಸುಳ್ಳು ಆರೋಪಗಳಿಂದ ನನಗೆ, ನನ್ನ ಕುಟುಂಬದವರಿಗೆ, ನನ್ನ ಧರ್ಮ ಪ್ರೊಡಕ್ಷನ್ ಕಂಪೆನಿ, ಸಹೋದ್ಯೋಗಿಗಳಿಗೆ ತೊಂದರೆಯಾಗುತ್ತದೆ. ಇನ್ನು ಕ್ಷಿತಿಜ್ ಪ್ರಸಾದ್ ಮತ್ತು ಅನುಭವ್ ಚೋಪ್ರಾ ಎಂಬುವವರು ನನ್ನ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರು ನನಗೆ ನಿಕಟವರ್ತಿಗಳು ಎಂದು ಹಲವು ಸುದ್ದಿವಾಹಿನಿಗಳಲ್ಲಿ ಬರುತ್ತಿವೆ, ಇವರಿಬ್ಬರೂ ಕೇವಲ ತಿಂಗಳುಗಳ ಕಾಲವಷ್ಟೇ ನನ್ನ ಕಂಪನಿಯಲ್ಲಿದ್ದರು. ಅವರ ಜೊತೆ ನನಗೆ ಆತ್ಮೀಯತೆ ಇಲ್ಲ, ಇನ್ನು ಮುಂದೆಯೂ ನನ್ನ ಬಗ್ಗೆ ನಕಾರಾತ್ಮಕ ಸುದ್ದಿಗಳನ್ನು ನೀಡುತ್ತಿದ್ದರೆ ಸುಮ್ಮನಿರಲು ಸಾಧ್ಯವಿಲ್ಲ, ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಕರಣ್ ಜೋಹರ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.