ಬಾಲಿವುಡ್

ಬಾಲಿವುಡ್ ನಟ ರಣಧೀರ್ ಕಪೂರ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಬಾಲಿವುಡ್‌ನ ಹಿರಿಯ ನಟ ರಣಧೀರ್ ಕಪೂರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲಿವುಡ್ ನಟ ರಣಧೀರ್ ಕಪೂರ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ರಣಧೀರ್ ಕಪೂರ್
Published On :

ಮುಂಬೈ: ಬಾಲಿವುಡ್‌ನ ಹಿರಿಯ ನಟ ರಣಧೀರ್ ಕಪೂರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 

74 ವರ್ಷ ವಯಸ್ಸಿನ ರಣಧೀರ್ ಕಪೂರ್‌ಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಣಧೀರ್ ಕಪೂರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆತಂಕ ಪಡುವಂಥದ್ದು ಏನೂ ಇಲ್ಲ. ಕೋವಿಡ್-19ಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಎರಡೂ ಡೋಸ್‌ಗಳ ಕೋವಿಡ್ ಲಸಿಕೆಯನ್ನು ರಣಧೀರ್ ಕಪೂರ್ ಪಡೆದಿದ್ದರು. ಲಸಿಕೆ ಪಡೆದಿದ್ದರೂ ರಣಧೀರ್ ಕಪೂರ್‌ಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಆದರೆ, ಚಳಿ ಜ್ವರ ಬಿಟ್ಟರೆ ರಣಧೀರ್ ಕಪೂರ್‌ಗೆ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ರಣಧೀರ್ ಕಪೂರ್ ಜೊತೆಗೆ ಅವರ ಐವರು ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.