ಕಂಗನಾ ವಿರುದ್ದ ಜಾಮೀನು ರಹಿತ ವಾರೆಂಟ್ ಕೋರಿ ಜಾವೇದ್ ಅಖ್ತರ್ ಅರ್ಜಿ ಸಲ್ಲಿಕೆ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅಖ್ತರ್ ಪರ ವಕೀಲ ಜಯ್ ಭಾರದ್ವಾಜ್ ಸಲ್ಲಿಸಿರುವ ಅರ್ಜಿಯಲ್ಲಿ, ಈ ವರ್ಷದ ಮಾರ್ಚ್ ನಿಂದ ಒಂದಲ್ಲಾ ಒಂದು ಕಾರಣಕ್ಕಾಗಿ ರಣಾವತ್ ಕೋರಿರುವ ವಿನಾಯಿತಿಗಳ ಪಟ್ಟಿಯನ್ನು ನೀಡಿದ್ದಾರೆ. ಸೆಪ್ಟೆಂಬರ್ 20 ರಂದು ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಆರ್ ಖಾನ್ ಎದುರು ಕಂಗನಾ ಕೊನೆಯ ಬಾರಿಗೆ ವಿಚಾರಣೆಗೆ ಹಾಜರಾಗಿದ್ದರು.
ಈ ವಿಚಾರದಲ್ಲಿ ವಿನಾಕಾರಣ ವಿಳಂಬ ಮಾಡಲು ಎಲ್ಲಾ ರೀತಿಯ ತಂತ್ರಗಳನ್ನು ಅವರು ಅನುಸರಿಸಿದ್ದಾರೆ. ನ್ಯಾಯಾಲಯದ ಮುಂದೆ ಸುಳ್ಳು, ಸರಿಯಾಗಿಇಲ್ಲದ ಹೇಳಿಕೆಗಳನ್ನು ಅವರು ನೀಡಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸದ ನ್ಯಾಯಾಲಯ, ಮುಂದಿನ ವಿಚಾರಣೆ ಜನವರಿ 4 ರೊಳಗೆ ವಿವರಣೆ ನೀಡುವಂತೆ ಕಂಗನಾ ಪರ ವಕೀಲರಿಗೆ ಸೂಚಿಸಿದೆ. ಮುಂದಿನ ವಿಚಾರಣೆ ವೇಳೆ ಕಂಗನಾ ಹಾಜರಾತಿಯನ್ನು ಖಾತ್ರಿಪಡಿಸುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಇದಕ್ಕೂ ಮುನ್ನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸ್ಥಳಾಂತರಿಸಲು ಕೋರಿ ರಣಾವತ್ ಸಲ್ಲಿಸಿದ ಅರ್ಜಿಯನ್ನು ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದರು.
ಟಿವಿ ಸಂದರ್ಶನವೊಂದರಲ್ಲಿ ರಣಾವತ್ ತಮ್ಮ ವಿರುದ್ಧ ಮಾನಹಾನಿಕಾರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಳೆದ ವರ್ಷ ನವೆಂಬರ್ ನಲ್ಲಿ ಅಖ್ತರ್ ಅಂಧೇರಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


