ಬಾಲಿವುಡ್

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ

ರಿಲಯನ್ಸ್ ಎಂಟರ್ಟೇನ್ಮೆಂಟ್ ಗ್ರೂಪ್ ಸಿಇಒ ಶಿಬಾಶಿಶ್ ಸರ್ಕಾರ್ ಟ್ವಿಟರ್‍ನಲ್ಲಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ
ಸಿನಿಮಾ ಪೋಸ್ಟರ್
Published On :

ಮುಂಬೈ: ನಿರ್ದೇಶಕ ಕಬೀರ್ ಖಾನ್, ನಟ ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ’83’ ಅನ್ನು ದೆಹಲಿಯಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ.

ರಿಲಯನ್ಸ್ ಎಂಟರ್ಟೇನ್ಮೆಂಟ್ ಗ್ರೂಪ್ ಸಿಇಒ ಶಿಬಾಶಿಶ್ ಸರ್ಕಾರ್ ಟ್ವಿಟರ್‍ನಲ್ಲಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ. 

1983 ರಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತವು ಕಪಿಲ್ ದೇವ್ ನೇತೃತ್ವದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಅದೇ ಘಟನೆಯನ್ನಾಧರಿಸಿ '83' ಸಿನಿಮಾ ತಯಾರಿಸಲಾಗಿದೆ. 

ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ’83’ ಸಿನಿಮಾ, ಡಿಸೆಂಬರ್ 24 ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.