ಯುವತಿಗೆ ಕಿರುಕುಳ ನೀಡಿದ್ದ ಕಿರುತೆರೆ ನಟ ಪ್ರಚೀನ್ ಚೌಹಾಣ್ ಬಂಧನ
22 ವರ್ಷದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾಣ್ ಅವರನ್ನು ಕುರಾರ್ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಈ ಘಟನೆ ಮುಂಬೈನ ಮಲಾಡ್ (ಈಸ್ಟ್) ನಲ್ಲಿನ ಚೌಹಾಣ್ ಅವರ ನಿವಾಸದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ವರ್ಷದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾಣ್ ಅವರನ್ನು ಕುರಾರ್ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಈ ಘಟನೆ ಮುಂಬೈನ ಮಲಾಡ್ (ಈಸ್ಟ್) ನಲ್ಲಿನ ಚೌಹಾಣ್ ಅವರ ನಿವಾಸದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ನಟನನ್ನು ಬಂಧಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ರಾಜೇಂದ್ರ ಮೋಹಿತೆ ಈ ಕುರಿತು ಸುದ್ದಿಯನ್ನು ದೃಢಪಡಿಸಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.
`ಕಸೌತಿ ಜಿಂದಗಿ ಕೇ` ಸೇರಿದಂತೆ ಹಲವು ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನಟ ಗುರುವಾರ ರಾತ್ರಿ ತಮ್ಮ ನಿವಾಸದಲ್ಲಿ ಪಾರ್ಟಿ ಆಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. "ದೂರುದಾರ ಯುವತಿ ತನ್ನ ಸ್ನೇಹಿತನೊಂದಿಗೆ ಅವರ ಮನೆಗೆ ಹೋಗಿದ್ದಳು , ಅಲ್ಲಿ ನಟನು ಮದ್ಯ ಸೇವಿಸಿ ಅವಳನ್ನು ಅಸಭ್ಯ ರೀತಿಯಲ್ಲಿ ನಡೆಸಿಕೊಂಡಿದ್ದಾನೆ." ಎಂದು ಅಧಿಕಾರಿಯೊಬ್ಬರು ಹೇಳಿದರು.
ನಂತರ ಯುವತಿ ಮನೆಗೆ ತೆರಳಿ ಶುಕ್ರವಾರ ಸಂಜೆ ಪೊಲೀಸ್ ಠಾಣೆಗೆ ಬಂದು ದೂರು ಸಲ್ಲಿಸಿದ್ದಾಳೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ ಮತ್ತು ನಂತರ ಕಿರುಕುಳ, ಮತ್ತು ಹಲ್ಲೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


