ಅಶ್ಲೀಲ ವಿಡಿಯೋ ಪ್ರಕರಣ: ಪೊಲೀಸರ ವಿಚಾರಣೆಗೆ ಗೈರಾದ ನಟಿ ಗೆಹಾನಾ ವಶಿಷ್ಠ
ಅಶ್ಲೀಲ ವೆಬ್ ಸೀರಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹಾನಾ ವಶಿಷ್ಠ ಮತ್ತು ಇತರ ಇಬ್ಬರು ಮುಂಬೈ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಅಶ್ಲೀಲ ವೆಬ್ ಸೀರಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹಾನಾ ವಶಿಷ್ಠ ಮತ್ತು ಇತರ ಇಬ್ಬರು ಮುಂಬೈ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್ಗಳ ಮೂಲಕ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಕುಂದ್ರಾ ಬಂಧನದ ನಂತರ, ಕುಂದ್ರಾರ ಆ್ಯಪ್ಗಾಗಿ ನಿರ್ಮಿಸಲಾದ ಮೂರು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಗೆಹಾನಾ ಈ ಹಿಂದೆ ಕಾಮಪ್ರಚೋದಕ ವಿಷಯವು ಅಶ್ಲೀಲ ಚಿತ್ರಗಳಿಗಿಂತ ಭಿನ್ನವಾಗಿದೆ ಎಂದು ಹೇಳಿದ್ದರು.
2021ರ ಫೆಬ್ರವರಿಯಲ್ಲಿ ಕೆಲ ಸಂತ್ರಸ್ತ ಮಹಿಳೆಯರು ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಮುಂಬೈ ಅಪರಾಧ ವಿಭಾಗವು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತ್ತು.
ತನಿಖೆ ವೇಳೆ ಸೈಬರ್ ಜಗತ್ತಿನಲ್ಲಿ ಅನೇಕ ಅಶ್ಲೀಲ ಸಂಬಂಧಿತ ಅಪ್ಲಿಕೇಶನ್ಗಳು ಕಾರ್ಯನಿರ್ವಹಿಸುತ್ತಿವೆ ಎಂಬುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈವರೆಗೆ ಕನಿಷ್ಠ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


