ನೀಲಿ ಚಿತ್ರಗಳ ನಿರ್ಮಾಣ ಪ್ರಕರಣ: ಕ್ರೈಮ್ ಬ್ರಾಂಚ್ ಪೊಲೀಸರಿಂದ ಶಿಲ್ಪಾಶೆಟ್ಟಿಗೆ ಇನ್ನೂ ಸಿಕ್ಕಿಲ್ಲ ಕ್ಲೀನ್ ಚಿಟ್!
ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.
ಈ ಕೇಸ್ ನಲ್ಲಿ ತೊಡಗಿಸಿಕೊಂಡಿರುವ ಎಲ್ಲಾರ ಖಾತೆಗಳ ವ್ಯವಹಾರ ವಿಚಾರಣೆಗಾಗಿ ವಿಧಿವಿಜ್ಞಾನ ಲೆಕ್ಕ ಪರಿಶೋಧಕರು ನೇಮಕ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.
ಶಿಲ್ಪಾಶೆಟ್ಟಿಗೆ ಇನ್ನೂ ಕ್ಲೀನ್ ಚಿಟ್ ನೀಡಿಲ್ಲ. ಎಲ್ಲಾ ರೀತಿಯ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಎಲ್ಲಾ ಖಾತೆಗಳ ವ್ಯವಹಾರ ಪರಿಶೀಲಿಸಲು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಲಾಗಿದೆ. ಅಡಿಟ್ ಗೆ ಸ್ವಲ್ಪ ಸಮಯ ಬೇಕಾಗಲಿದೆ. ಅದೊಂದು ಧೀರ್ಘ ಪ್ರಕ್ರಿಯೆಯಾಗಿದೆ. ಆದರೆ, ಆಡಿಟ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾರಿಗೂ ಕ್ಲೀನ್ ಚಿಟ್ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸಾಕ್ಷಿದಾರರಾಗಿ ಹೇಳಿಕೆ ನೀಡಲು ಶೆರ್ಲಾನ್ ಚೋಪ್ರಾ ಅವರನ್ನು ವಿಚಾರಣೆ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


