ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲು
ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿರುವ ನಾಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿರುವ ನಾಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಮಾಹಿತಿ ನೀಡಿದ್ದಾರೆ
"ಜೂನ್ 29 ರಂದು ನಟ ಆಸ್ಪತ್ರೆಗೆದಾಖಲಾಗಿದ್ದರು, ಆದರೆ ಈಗ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಶ್ವಾಸಕೋಶಕ್ಕೆನ್ಯುಮೋನಿಯಾ ಸೋಂಕು ತಗುಲಿದೆ. ಚಿಕಿತ್ಸೆ ನಡೆಯುತ್ತಿದ್ದು ಇಂದು ಅಥವಾ ನಾಳೆ ಬಿಡುಗಡೆ ಮಾಡಬಹುದು, ”
ಈ ನಟ ಕೊನೆಯ ಬಾರಿಗೆ ವಿವೇಕ್ ಅಗ್ನಿಹೋತ್ರಿ ಅವರ ದಿ ತಾಷ್ಕೆಂಟ್ ಫೈಲ್ಸ್, ಸೀಮಾ ಪಹ್ವಾ ಅವರ ರಾಮ್ ಪ್ರಸಾದ್ ಕಿ ತೆಹರ್ವಿ, ಮತ್ತು ಝೀ ಪೈವ್ ನ ಮೀ ರಕ್ಸಮ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟನಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ ಪದ್ಮಶ್ರೀ ಮತ್ತು ಪದ್ಮಭೂಷಣ ನೀಡಿ ಗೌರವಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


