ಬಾಲಿವುಡ್

1947 ರಲ್ಲಿ ಯಾವ ಯುದ್ಧ ನಡೆಯಿತು ಎಂದು ಹೇಳಿದರೆ ಪದ್ಮಶ್ರೀ ಪ್ರಶಸ್ತಿ ವಾಪಸ್: ನಟಿ ಕಂಗನಾ ಸವಾಲು

ಭಾರತಕ್ಕೆ 1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರವ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, 1947 ರಲ್ಲಿ ಯಾವ ಯುದ್ಧ ನಡೆದಿತ್ತು ಎಂದು ಪ್ರಶ್ನಿಸಿದ್ದಾರೆ.

1947 ರಲ್ಲಿ ಯಾವ ಯುದ್ಧ ನಡೆಯಿತು ಎಂದು ಹೇಳಿದರೆ ಪದ್ಮಶ್ರೀ ಪ್ರಶಸ್ತಿ ವಾಪಸ್: ನಟಿ ಕಂಗನಾ ಸವಾಲು
ಕಂಗನಾ ರನೌತ್
Published On :

ನವದೆಹಲಿ: ಭಾರತಕ್ಕೆ 1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರವ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಈಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, 1947 ರಲ್ಲಿ ಯಾವ ಯುದ್ಧ ನಡೆದಿತ್ತು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಯಾರಾದರೂ ತಮ್ಮ ಪ್ರಶ್ನೆಗೆ ಉತ್ತರಿಸಿದರೆ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದು ಶನಿವಾರ ಹೇಳಿದ್ದಾರೆ.

ಆಗಾಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುವ ನಟಿ ಕಂಗನಾ ಅವರು ಇತ್ತೀಚಿಗೆ '1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ ಎಂದಿದ್ದರು. ಕಂಗನಾ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೆಲವು ಬಿಜೆಪಿ ನಾಯಕರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ 'ಪದ್ಮಶ್ರೀ' ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ತಮ್ಮ ವಿರುದ್ಧದ ಟೀಕೆಗಳಿಗೆ ಇನ್‌ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ, ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಇನ್‌ಸ್ಟಾಗ್ರಾಂ ನಲ್ಲಿ ಹಲವು ಪ್ರಶ್ನೆಗಳನ್ನು ಪೋಸ್ಟ್ ಮಾಡಿರುವ ನಟಿ, ಮಹಾತ್ಮ ಗಾಂಧಿಜಿ ದೇಶದ ವಿಭಜನೆಗೆ ಕಾರಣರಾದರು ಮತ್ತು ಭಗತ್ ಸಿಂಗ್ ಅವರನ್ನು ಸಾಯಲು ಬಿಟ್ಟರು. ಅಲ್ಲದೆ ಸುಭಾಷ್ ಚಂದ್ರ ಬೋಸ್ ಅವರನ್ನು ಬೆಂಬಲಿಸಲಿಲ್ಲ ಎಂದು ಆರೋಪಿಸಿದ್ದಾರೆ.

1947 ರಲ್ಲಿ ಯಾವ ಯುದ್ಧ ನಡೆಯಿತು ಎನ್ನುವುದನ್ನು ನನಗೆ ವಿವರಿಸಿ ಅರಿವು ಮೂಡಿಸಿದಲ್ಲಿ ನಾನು ಪದ್ಮಶ್ರೀ ವಾಪಸ್ ನೀಡುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದು ನಟಿ ಕಂಗನಾ ಬರೆದಿದ್ದಾರೆ.

ಈ ಹಿಂದೆ ಟೈಮ್ಸ್ ನೌ ಸಮಿಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಂಗನಾ ರನೌತ್ ಅವರು, ಸ್ವಾತಂತ್ರ್ಯದ ಕುರಿತು ಮಾತನಾಡಿದ್ದರು. '1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ ಎಂದಿದ್ದರು. ಕಂಗನಾ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೆಲವು ಬಿಜೆಪಿ ನಾಯಕರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.