ಸಂಭ್ರಮಿಸಬೇಕಾಗಿರುವುದು ಮದುವೆಯನ್ನಲ್ಲ, ವಿಚ್ಛೇದನವನ್ನು: ರಾಮ್ ಗೋಪಾಲ್ ವರ್ಮಾ ಟ್ವೀಟ್
ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಸದಾ ತಮ್ಮ ನೇರ ನುಡಿಗಳಿಗೆ ಹೆಸರಾಗಿರುವ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ದಕ್ಷಿಣ ಭಾರತದ ತಾರೆಯರಾದ ಸಮಂತಾ ಅಕ್ಕಿನೇನಿ ಹಾಗೂ ನಾಗಚೈತನ್ಯ ಡೈವೋರ್ಸ್ ನೀಡಿರುವ ಬೆನ್ನಲ್ಲೇ ತಮ್ಮದೇ ಸ್ಟೈಲ್ ನಲ್ಲಿ ಟ್ವೀಟ್ ಮಾಡಿರುವ ಅವರು ಸಂಭ್ರಮಿಸಬೇಕಾಗಿರುವುದು ಮದುವೆಗಳನ್ನಲ್ಲ, ವಿಚ್ಚೇದನಗಳನ್ನು ಎಂದು ಟ್ವೀಟ್ ಮಾಡಿದ್ದಾರೆ.
ಅವರು ಇನ್ನೂ ಮುಂದುವರೆದು ಮದುವೆಗಳು ಸಾವಿದ್ದಂತೆ ಆದರೆ ವಿಚ್ಚೇದನ ಒಂದು ರೀತಿ ಪುನರ್ಜನ್ಮ ಇದ್ದಂತೆ ಎಂದು ಅವರು ಹೇಳಿದ್ದಾರೆ. ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಪರಸ್ಪರ ಒಪ್ಪಿಗೆ ಮೇರೆಗೆ ತಮ್ಮ ವಿಚ್ಚೇದನವನ್ನು ಅಧಿಕೃತವಾಗಿ ಧೃಡಪಡಿಸಿಕೊಂಡ ಬೆನ್ನಲ್ಲೇ ಈಗ ರಾಮ್ ಗೋಪಾಲ್ ವರ್ಮಾ ಅವರ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಮದುವೆಗಳನ್ನು ಅಲ್ಲ, ಬದಲಾಗಿ ಡಿವೋರ್ಸ್‍ಗಳನ್ನು ಸಂಭ್ರಮಿಸಬೇಕಾದ ಪರಿಸ್ಥಿತಿ ಬಂದಿದೆ. ಮದುವೆಗಳು ಸಾವಿದ್ದಂತೆ, ಡಿವೋರ್ಸ್ ಪುನರ್ಜನ್ಮ ಇದ್ದಂತೆ. ಮದುವೆಗಳು ನರಕದಲ್ಲಿ ಹಾಗೂ ಡಿವೋರ್ಸ್ ಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತವೇ ಎಂದು ತಮ್ಮದೇ ಶೈಲಿಯಲ್ಲಿ ನಿರ್ದೇಶಕರು ಬರೆದುಕೊಂಡಿರುವುದು ಎಲ್ಲರ ಗಮನ ಸೆಳೆದಿದೆ.
MARRIAGES are made in HELL and DIVORCES are made in HEAVEN
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


