'ವಿಶ್ವದ ಅತ್ಯಂತ ಸುಂದರ ವ್ಯಕ್ತಿ' ನನ್ನ ಗಂಡ: ಕರೀನಾ ಕಪೂರ್
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರು ಶನಿವಾರ 9ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆ ಕರೀನಾ ಕಪೂರ್ ಅವರು, ಸೈಫ್ ಅಲಿ ಖಾನ್ ಜೊತೆ ಇರುವ...

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಅವರು ಶನಿವಾರ 9ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆ ಕರೀನಾ ಕಪೂರ್ ಅವರು, ಸೈಫ್ ಅಲಿ ಖಾನ್ ಜೊತೆ ಇರುವ ಫೋಟೋವೊಂದನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಈ ಫೋಟೋವನ್ನು ಪೋಸ್ಟ್ ಮಾಡುವುದರ ಜೊತೆಗೆ ಒಂದಾನೊಂದು ಕಾಲದಲ್ಲಿ ಗ್ರೀಸ್ನಲ್ಲಿ ಒಂದು ಬೌಲ್ ಸೂಪ್ ಜೊತೆ ನಾವು ಇದ್ದೇವು. ಆ ಸಮಯ ನಮ್ಮ ಜೀವನವನ್ನೇ ಬದಲಿಸಿಬಿಟ್ಟಿತು. ವಿಶ್ವದ ಅತ್ಯಂತ ಸುಂದರ ವ್ಯಕ್ತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಎಂದು ಕರೀನಾ ಬರೆದಿದ್ದಾರೆ.
ಸೈಫ್ ಹುಟ್ಟುಹಬ್ಬವನ್ನು ಆಚರಿಸಲು ಕರೀನಾ ಮತ್ತು ಸೈಫ್ ಮಾಲ್ಡೀವ್ಸ್ ಗೆ ಹೋಗಿದ್ದರು. ಇಂದು ತಮ್ಮ ವಿವಾಹ ವಾರ್ಷಿಕೋತ್ಸವದಂದು ಕರೀನಾ ಗ್ರೀಸ್ ಪ್ರವಾಸವನ್ನು ನೆನಪಿಸಿಕೊಂಡಿದ್ದಾರೆ.
ಕರಿಷ್ಮಾ ಕಪೂರ್ ಮತ್ತು ಪ್ರಿಯಾಂಕಾ ಚೋಪ್ರಾ ಈ ಪೋಸ್ಟ್ಗೆ ಪ್ರತಿಕ್ರಿಯಿಸಿದ್ದಾರೆ. ನೀವು ಎಂದೆಂದಿಗೂ ನನ್ನ ನೆಚ್ಚಿನ ದಂಪತಿಗಳು ಎಂದು ಕರಿಷ್ಮಾ ಹಾರ್ಟ್ ಎಮೋಜಿಗಳೊಂದಿಗೆ ಬರೆದಿದ್ದಾರೆ. ನಿಮಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಮತ್ತು ದೇವರ ಆಶೀರ್ವಾದ ನಿಮ್ಮ ಮೇಲಿರಲಿ ಎಂದು ಪ್ರಿಯಾಂಕಾ ಚೋಪ್ರಾ ಬರೆದಿದ್ದಾರೆ.
ಕರೀನಾ ಕಪೂರ್ ಅವರು ಸೈಫ್ ಅಲಿ ಖಾನ್ ಅವರನ್ನು ಅಕ್ಟೋಬರ್ 16, 2012 ರಂದು ವಿವಾಹವಾದರು. ಅವರು ತಮ್ಮ ಮೊದಲ ಮಗು ತೈಮೂರ್ಗೆ ಡಿಸೆಂಬರ್ 20, 2016 ರಂದು ಜನ್ಮ ನೀಡಿದರು. ಅವರ ಎರಡನೇ ಮಗ ಜೆಹ್ ಈ ವರ್ಷ ಫೆಬ್ರವರಿ 21 ರಂದು ಜನಿಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


