ಬಾಲಿವುಡ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ
ತಾಯಿ ಜೊತೆ ಅಕ್ಷಯ್ ಕುಮಾರ್
Published On :

ಮುಂಬಯಿ: ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ.  ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನ್ನ ತಾಯಿಯೇ ನನ್ನ ಮೂಲ. ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.

ಅನೇಕ ದಿನಗಳಿಂದ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಳೆದೆರಡು ದಿನಗಳ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತಮ್ಮ ‘ಸಿಂಡ್ರೆಲಾ’ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಮುಂಬೈಗೆ ದೌಡಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.