ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಆರು ಕಡೆ ಐಟಿ ದಾಳಿ
ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಟನ ಮನೆ ಮತ್ತು ಲಖನೌ ಕಂಪನಿಗಳಲ್ಲಿ ಐಟಿ ಅಧಿಕಾರಿಗಳು ತಪಾಪಣೆ ನಡೆಸಿದ್ದಾರೆ. ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಸೋನು ಸೂದ್ ವಿರುದ್ಧ ಐಟಿ ದಾಳಿ ನಡೆದಿದೆ. ಆದರೆ ದಾಳಿ ಕುರಿತಂತೆ ಸೋನು ಸೂದ್ ಅಧಿಕೃತ ಹೇಳಿಕೆ ನೀಡಿಲ್ಲ.
ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ವರ್ಷ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ವಲಸಿಗರು ತಮ್ಮ ರಾಜ್ಯಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ನಟ ರಾಷ್ಟ್ರೀಯ ಗಮನ ಸೆಳೆದರು.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 48 ವರ್ಷದ ಸೂದ್ ಆಮ್ ಆದ್ಮಿ ಪಕ್ಷದ ಸರ್ಕಾರದ ದೇಶ್ ಕಾ ಮೆಂಟರ್ಸ್ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


