ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ
ಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ.

ಮುಂಬೈ: ದಕ್ಷಿಣಭಾರತದ ನಟ ಆರ್. ಮಾಧವನ್ ಇದೇ ಮೊದಲ ಬಾರಿಗೆ ನಿರ್ದೇಶನ ಜವಾಬ್ದಾರಿ ಹೊತ್ತಿರುವ ಸಿನಿಮಾ 'ರಾಕೆಟ್ರಿ: ದಿ ನಂಬಿ ಎಫೆಕ್ಟ್' ಎಪ್ರಿಲ್ 1, 2022ರಂದು ತೆರೆಕಾಣಲಿದೆ ಎಂಡು ಚಿತ್ರತಂಡ ಬಹಿರಂಗಪಡಿಸಿದೆ.
ಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ನ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ.
ಇಸ್ರೊ ವಿಜ್ಞಾನಿಯಾಗಿದ್ದ ನಂಬಿ ನಾರಾಯಣನ್ ಅವರ ಮೇಲೆ ಸುಳ್ಳು ಗೂಢಚರ್ಯೆ ಆರೋಪ ಹೊರಿಸಲಾಗಿತ್ತು. ಭಾರತದ ತಂತ್ರಜ್ಞಾನವನ್ನು ಅವರು ವಿದೇಶಿ ಶಕ್ತಿಗಳಿಗೆ ಮಾರಾಟ ಮಾಡಿದ್ದಾಗಿ ಅವರ ಮೇಲೆ ದೂರಲಾಗಿತ್ತು.
ಇದನ್ನೂ ಓದಿ: ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದಲ್ಲಿ ಕ್ರಯೋಜೆನಿಕ್ ತಂತ್ರಜ್ಞಾನ ಅಭಿವೃದ್ಧಿ ವಿಳಂಬ: ಕೇರಳ ಹೈಕೋರ್ಟ್ ಗೆ ಸಿಬಿಐ
ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದು ನಾರಾಯಣನ್ ಮೇಲಿನ ಆರೋಪ ಸುಳ್ಳು ಎಂದು ಸಾಬೀತಾಗಿ ಅವರು ಅರೋಪ ಮುಕ್ತರಾಗಿದ್ದರು. ಇದೀಗ ಅವರ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ ಎನ್ನಲಾದ ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
Related Article
ಲತಾ ಮಂಗೇಶ್ಕರ್ ಗೆ 92ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಶುಭ ಹಾರೈಕೆ
ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್
ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ
ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಜಾಮೀನು: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ
ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


