ಅಶ್ಲೀಲ ವಿಡಿಯೋ ಪ್ರಕರಣ: ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ; ಶಿಲ್ಪಾ ಶೆಟ್ಟಿ ಮನವಿ
ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.
ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣ ಸಂಬಂಧ ಜುಲೈ 19ರಂದು ಮುಂಬೈ ಅಪರಾಧ ವಿಭಾಗ ಉದ್ಯಮಿ ರಾಜ್ ಕುಂದ್ರಾರನ್ನು ಬಂಧಿಸಿತ್ತು. ಅಶ್ಲೀಲ ಚಿತ್ರಗಳ ಸೃಷ್ಟಿ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳ ಪ್ರಸರಣ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಲಾಗಿದೆ.
ಇನ್ನು ರಾಜ್ ಕುಂದ್ರಾ ವಿಚಾರವಾಗಿ ದಿನಕ್ಕೊಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬವನ್ನು ಟ್ರೋಲ್ ಮಾಡಲಾಗುತ್ತಿದೆ. ಇದರಿಂದ ಮನನೊಂದು ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿರುವ ಶಿಲ್ಪಾ ಶೆಟ್ಟಿ ಮುಂಬೈ ಪೊಲೀಸರು ಮತ್ತು ಭಾರತೀಯ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದ್ದು, ನಿಪಕ್ಷಪಾತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸುತ್ತಾರೆ ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಈ ವಿಚಾರವಾಗಿ ಕಳೆದ ಕೆಲವು ದಿನಗಳು ನನಗೆ ಸವಾಲುಗಳು ಎದುರಾಗಿವೆ. ಸಾಕಷ್ಟು ವದಂತಿಗಳು ಮತ್ತು ಆರೋಪಗಳು ಕೇಳಿ ಬಂದಿವೆ. ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ನನ್ನ ಪರವಾಗಿ ಸುಳ್ಳು ಹೇಳಿಕೆಗಳನ್ನು ನೀಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.
ನಾನು ಹೆಮ್ಮೆಯ ಕಾನೂನು ಪಾಲಿಸುವ ಭಾರತೀಯ ಪ್ರಜೆ. ಜೊತೆಗೆ ಕಳೆದ 29 ವರ್ಷಗಳಿಂದ ಕಠಿಣ ಪರಿಶ್ರಮದ ವೃತ್ತಿಪರತೆಯನ್ನು ಕಾಪಾಡಿಕೊಂಡು ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


