ಬಾಲಿವುಡ್

ಭುವನ ಸುಂದರಿ ಹರ್ನಾಜ್ ಕೌರ್ ಸಂಧು ಭಾರತಕ್ಕೆ ಆಗಮನ

ಭುವನ ಸುಂದರಿ (miss-universe) ಸ್ಪರ್ಧೆಯಲ್ಲಿ ವಿಜೇತರಾದ ಭಾರತದ ಹರ್ನಾಜ್ ಕೌರ್ ಸಂಧು ಇಂದು ಸ್ವದೇಶಕ್ಕೆ ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಭುವನ ಸುಂದರಿ ಹರ್ನಾಜ್ ಕೌರ್ ಸಂಧು ಭಾರತಕ್ಕೆ ಆಗಮನ
ಭಾರತಕ್ಕೆ ಆಗಮಿಸಿದ ಹರ್ನಾಜ್ ಕೌರ್ ಸಂಧು
Published On :

ನವದೆಹಲಿ: ಭುವನ ಸುಂದರಿ (miss-universe) ಸ್ಪರ್ಧೆಯಲ್ಲಿ ವಿಜೇತರಾದ ಭಾರತದ ಹರ್ನಾಜ್ ಕೌರ್ ಸಂಧು ಇಂದು ಸ್ವದೇಶಕ್ಕೆ ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇಂದು ಸಂಜೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭುವನ ಸುಂದರಿ 'ಹರ್ನಾಜ್ ಕೌರ್ ಸಂಧು'ರನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಬರುವಿಕೆಗಾಗಿಯೇ ಕಾದು ಕುಳಿತಿದ್ದ ಅಭಿಮಾನಿಗಳು, ಸ್ನೇಹಿತರು ಮತ್ತು ಬಂಧುಗಳುಹರ್ನಾಜ್ ಕೌರ್ ಸಂಧು ಪರ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ ತಂದುಕೊಟ್ಟ ಸುಂದರಿ
ಇನ್ನು ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು(Harnaaz Kaur Sandhu) 70ನೇ ಮಿಸ್ ಯೂನಿವರ್ಸ್ ಪಟ್ಟ ಒಲಿಸಿಕೊಂಡಿದ್ದರು. ಇದು ಬರೊಬ್ಬರಿ 21 ವರ್ಷಗಳ ಬಳಿಕ ಭಾರತಕ್ಕೆ ಒಲಿದುಬಂದ ಪಟ್ಟವಾಗಿದೆ. ಕೊನೆಯ ಬಾರಿ 2000ನೇ ಇಸವಿಯಲ್ಲಿ ಬಾಲಿವುಡ್ ನಟಿ ಲಾರಾ ದತ್ತ ಅವರಿಗೆ ಮಿಸ್ ಯೂನಿವರ್ಸ್ ಪಟ್ಟ ಒಲಿದಿತ್ತು. ಆ ಬಳಿಕ ಬರೋಬ್ಬರಿ 21 ವರ್ಷಗಳ ನಂತರ ಭಾರತದ ರ್ನಾಜ್ ಕೌರ್ ಸಂಧು ಈ ಕಿರೀಟವನ್ನು ಧರಿಸಿದ್ದಾರೆ.

ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಧರಿಸಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.