ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ನ್ಯಾಯಾಂಗ ಬಂಧನ ಅವಧಿ ಅ.30 ರವರೆಗೆ ವಿಸ್ತರಣೆ, ಅನನ್ಯಾಗೆ ತೀವ್ರ ವಿಚಾರಣೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ನ್ಯಾಯಾಂಗ....

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎನ್ ಸಿಬಿ ವಿಶೇಷ ಸೆಷನ್ಸ್ ಕೋರ್ಟ್ ಅಕ್ಟೋಬರ್ 30ರ ವರೆಗೆ ವಿಸ್ತರಿಸಿದೆ.
ಆರೋಪಿಗಳನ್ನು ದೈಹಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿಲ್ಲ. ಆರ್ಯನ್ ಖಾನ್ ಅವರನ್ನು ಈ ಮೊದಲು ಅಕ್ಟೋಬರ್ 7 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. 14 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಅದನ್ನು ಅಕ್ಟೋಬರ್ 30ರ ವರೆಗೆ ವಿಸ್ತರಿಸಿದೆ.
ಏತನ್ಮಧ್ಯೆ, ಬಾಲಿವುಡ್ ನಟಿ ಅನನ್ಯಾ ಪಾಂಡೆಯವರ ಮುಂಬೈ ನಿವಾಸದ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ನಂತರ, ಅನನ್ಯಾ ಪಾಂಡೆ ಅವರು ತಮ್ಮ ತಂದೆ ಹಾಗೂ ನಟ ಚಂಕಿ ಪಾಂಡೆಯೊಂದಿಗೆ ಎನ್‌ಸಿಬಿ ಕಚೇರಿಗೆ ವಿಚಾರಣೆಗೆ ತೆರಳಿದರು.
ಈ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರ್ಯನ್ ಖಾನ್ ಅವರಿಗೆ ಇನ್ನೂ ಜಾಮೀನು ಲಭಿಸಿಲ್ಲ. ಈವರೆಗೆ ಮೂರು ಬಾರಿ ವಿಶೇಷ ನ್ಯಾಯಾಲಯ ಜಾಮೀನು ಆರ್ಜಿ ವಜಾಗೊಳಿಸಿದೆ. ಆರ್ಯನ್ ವಿರುದ್ಧ ಬಲವಾದ ಪುರಾವೆಗಳಿವೆ. ಜಾಮೀನು ನೀಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ವಿಶೇಷ ಕೋರ್ಟ್ ಸ್ಪಷ್ಟಪಡಿಸಿದೆ.
ಈಗ ಆರ್ಯನ್ ಖಾನ್ ಅವರು ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು, ಅಕ್ಟೋಬರ್ 26ಕ್ಕೆ ಅರ್ಜಿಯ ವಿಚಾರಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


