ಬಾಲಿವುಡ್

ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
ನಿತಿನ್ ಮನಮೋಹನ್
Published On :

ಮುಂಬೈ: ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಅವರನ್ನು  ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಿತಿನ್ ಮನಮೋಹನ್ ಅವರು ಬೋಲ್ ರಾಧಾ ಬೋಲ್ ಮತ್ತು ಲಾಡ್ಲಾ ಮುಂತಾದ ಹಿನ್ನಲೆ ಚಲನಚಿತ್ರಗಳನ್ನು ನಿರ್ಮಿಸಿ ಹೆಸರುವಾಸಿಯಾಗಿದ್ದಾರೆ. 

ಶನಿವಾರ ಸಂಜೆ ನಿತಿನ್ ಮನಮೋಹನ್ ಅವರಿಗೆ ತೀವ್ರ ಹೃದಯಾಘಾತವಾಗಿದ್ದು,  ಅವರನ್ನು ನವಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ ಎಂದು ಆಸ್ಪತ್ರೆ ಅಧಿಕಾರಿ ತಿಳಿಸಿದ್ದಾರೆ. 

ದಿವಂಗತ ನಟ ಮನಮೋಹನ್ ಅವರ ಪುತ್ರನಾಗಿರುವ ನಿತಿನ್ ಮನಮೋಹನ್ ಅವರು, ಬ್ರಹ್ಮಚಾರಿ, ಗುಮ್ನಾಂ ಮತ್ತು ನಯಾ ಜಮಾನಾ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.