ಬಾಲಿವುಡ್

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ

ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ
ರಾಜಮೌಳಿ, ನಾಗಾರ್ಜುನ, ಚಿರಂಜೀವಿ ಅವರೊಂದಿಗೆ ಚಿತ್ರ ವೀಕ್ಷಿಸುತ್ತಿರುವ ಆಮಿರ್ ಖಾನ್
Published On :

ಹೈದ್ರಾಬಾದ್:  ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದು, ಚಿರಂಜೀವಿ, ನಾಗಾರ್ಜುನ, ಎಸ್.ಎಸ್. ರಾಜಮೌಳಿ, ಸುಕುಮಾರ್ ಮತ್ತು ನಾಗ ಚೈತನ್ಯ ಅವರೊಂದಿಗೆ ಚಿತ್ರವನ್ನು ವೀಕ್ಷಿಸಿದ್ದಾರೆ.

ತೆಲುಗಿನ ಸ್ಟಾರ್ ನಟರು ಹಾಗೂ ನಿರ್ದೇಶಕರೊಂದಿಗೆ ಲಾಲ್ ಸಿಂಗ್ ಚಡ್ಡಾ ಸಿನಿಮಾವನ್ನು ಆಮಿರ್ ಖಾನ್ ವೀಕ್ಷಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗ ಚೈತನ್ಯ ಕೂಡಾ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಲಾಲ್ ಸಿಂಗ್ ಚಡ್ಡಾ ಟಾಮ್ ಹಂಕ್ಸ್ ಅಭಿನಯದ ಫಾರೆಸ್ಟ್ ಗಂಪ್ ಚಿತ್ರದ ರಿಮೇಕ್ ಆಗಿದೆ. 

ಅದ್ವೈತ್ ಚಂದನ್ ನಿರ್ದೇಶನದ ಕರೀನಾ ಕಫೂರ್, ಮೊನಾ ಸಿಂಗ್ ಮತ್ತಿತರರು ನಟಿಸಿದ್ದಾರೆ. ಅಕ್ಷಯ್ ಕುಮಾರ್ ಅವರ ರಕ್ಷಾ ಬಂಧನ್ ಜೊತೆಗೆ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.