ಬಾಲಿವುಡ್

ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಸಲ್ಮಾನ್ ಖಾನ್

ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಸಲ್ಮಾನ್ ಖಾನ್
ಸಲ್ಮಾನ್ ಖಾನ್
Published On :

ಮುಂಬೈ: ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಳೆದ ತಿಂಗಳು ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರದಲ್ಲಿ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರನ್ನು ಉದ್ದೇಶಿಸಿ ಜೀವ ಬೆದರಿಕೆ ಪತ್ರ ಬಂದ ನಂತರ ಈ ಬೆಳವಣಿಗೆ ನಡೆದಿದೆ.

ತನಗೆ ಮತ್ತು ತಮ್ಮ ತಂದೆಗೆ ಜೀವ ಬೆದರಿಕೆ ಪತ್ರ ಬಂದ ನಿಮಿತ್ತ ಸಲ್ಮಾನ್ ಖಾನ್ ಅವರು ಜುಲೈ 22 ರಂದು ಶುಕ್ರವಾರ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ನಿಮ್ಮ ಜೀವನವು ಪಂಜಾಬಿ ಗಾಯ ಸಿಧು ಮೂಸೆವಾಲಾ ಅವರ ರೀತಿಯಲ್ಲೇ ಕೊನೆಗೊಳ್ಳುವುದು ಎಂದು ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.