ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಬಿಪಾಶಾ ಬಸು, 'ಬೇಬಿ ಬಂಪ್ ಫೋಟೋಶೂಟ್!
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಿಪಾಶಾ ಬಸು ಬೇಬಿ ಬಂಪ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗ್ಗಾಗೆ ತಮ್ಮ ಖಾಸಗಿ ಜೀವನದ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಿಪಾಶಾ ಬಸು ಬೇಬಿ ಬಂಪ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗ್ಗಾಗೆ ತಮ್ಮ ಖಾಸಗಿ ಜೀವನದ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಗರ್ಭಿಣಿಯಾಗಿರುವ ಅನೇಕ ಫೋಟೋಗಳನ್ನು ಬಿಪಾಶಾ ಬಸು ಹಂಚಿಕೊಂಡಿದ್ದಾರೆ. ಇದೀಗ ಬೇಬಿ ಬಂಪ್ ನ ಮತ್ತೊಂದು ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಶುಕ್ರವಾರ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ, ಗೋಲ್ಡನ್ ಬಣ್ಣದ ಬಟ್ಟೆಯೊಂದಿಗೆ ಬೇಬಿ ಬಂಪ್ ತೋರಿಸಿದ್ದಾರೆ. ಇದರ ಜೊತೆಗೆ 'ಎಲ್ಲಾ ಸಮಯದಲ್ಲೂ ನಿಮ್ಮನ್ನು ನೀವು ಪ್ರೀತಿಸಿ, ನೀವು ಜೀವಿಸುವ ದೇಹವನ್ನು ಪ್ರೀತಿಸಿ ಎಂದು ಬರೆದುಕೊಂಡಿದ್ದಾರೆ.
ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಏಪ್ರಿಲ್ 30,2016ರಲ್ಲಿ ವಿವಾಹವಾಗಿದ್ದರು. ಈ ವರ್ಷದ ಆಗಸ್ಟ್ ನಲ್ಲಿ ತಾವು ಗರ್ಭಿಣಿಯಾಗಿರುವುದನ್ನು ಅಧಿಕೃತವಾಗಿ ಘೋಷಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


