ಲಾಲ್ ಸಿಂಗ್ ಚಡ್ಡಾ ಸಿನಿಮಾ ಸೋಲು: ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಟನೆಯಿಂದ ಬ್ರೇಕ್: ಅಮೀರ್ ಖಾನ್ ಘೋಷಣೆ
ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ ಎಂದು ಬಾಲಿವುಡ್ ನಟ ಅಮೀರ್ ಖಾನ್ ಹೇಳಿದ್ದಾರೆ.

ದೆಹಲಿ: ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ ಎಂದು ಬಾಲಿವುಡ್ ನಟ ಅಮೀರ್ ಖಾನ್ ಹೇಳಿದ್ದಾರೆ.
35 ವರ್ಷಕ್ಕೂ ಹೆಚ್ಚು ಕಾಲ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಈಗ ಒಂದು ವರ್ಷ ಬಿಡುವು ಪಡೆದುಕೊಳ್ಳಲು ನಿರ್ಧರಿಸಿದ್ದೇನೆ. ಕುಟುಂಬದ ಜತೆ ಇರಲು ಬಯಸಿದ್ದೇನೆ ಎಂದು ಅಮೀರ್ ತಿಳಿಸಿದ್ದಾರೆ. ಲಾಲ್ ಸಿಂಗ್ ಚಡ್ಡಾ ಸಿನಿಮಾದ ಬಳಿಕ ಚಾಂಪಿಯನ್ಸ್ ಚಿತ್ರದ ಕೆಲಸ ಆರಂಭಿಸುವುದಾಗಿ ಅಮೀರ್ ಹೇಳಿದ್ದರು.
ನಾನು ನಟನಾಗಿ ಸಿನಿಮಾ ಮಾಡುವಾಗ, ನನ್ನ ಜೀವನದಲ್ಲಿ ಬೇರೇನೂ ಆಗುವುದಿಲ್ಲ. ಸಿನಿಮಾದಲ್ಲಿ ನಾನು ತುಂಬಾ ಕಳೆದುಹೋಗುತ್ತೇನೆ. ನಾನು ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ, ನನ್ನ ಕುಟುಂಬದೊಂದಿಗೆ, ನನ್ನ ತಾಯಿ, ನನ್ನ ಮಕ್ಕಳೊಂದಿಗೆ ಇರಲು ಬಯಸುತ್ತೇನೆ ಎಂದಿದ್ದಾರೆ.
ಇದು ಬಹುಶಃ ನನ್ನ 35 ವರ್ಷಗಳ ವೃತ್ತಿಜೀವನದಲ್ಲಿ ನಾನು ತೆಗೆದುಕೊಳ್ಳುತ್ತಿರುವ ಮೊದಲ ವಿರಾಮ. ನಾನು 35 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸದ ಮೇಲೆ ಮಾತ್ರ ಗಮನಹರಿಸಿದ್ದೇನೆ ಎಂದಿದ್ದಾರೆ. ನಾನು ಮುಂದಿನ ವರ್ಷಕ್ಕಾಗಿ ಎದುರು ನೋಡುತ್ತಿದ್ದೇನೆ. ಒಂದೂವರೆ ವರ್ಷ ನಾನು ನಟನಾಗಿ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
ಅಮೀರ್ ಖಾನ್ ಇತ್ತೀಚೆಗೆ ಅಪರೂಪದ ಲುಕ್ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು, ಅವರ ಇತ್ತೀಚಿನ ಚಿತ್ರ ಲಾಲ್ ಸಿಂಗ್ ಚಡ್ಡಾ ಬಾಕ್ಸ್ ಆಫೀಸ್ನಲ್ಲಿ ಫೇಲ್ ಆದ ನಂತರ ಮೊದಲ ಬಾರಿ ಈ ರೀತಿ ಕಾಣಿಸಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೀರ್ ತಮ್ಮ ಬೆಳ್ಳಿ ಕೂದಲು ಮತ್ತು ಗಡ್ಡವನ್ನು ನ್ಯಾಚುರಲ್ ಲುಕ್ನಲ್ಲಿ ತೋರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


