ಖ್ಯಾತ ಕಿರುತೆರೆ ನಟಿ ವೈಶಾಲಿ ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಬಾಯ್ ಫ್ರೆಂಡ್ ಬಗ್ಗೆ ಉಲ್ಲೇಖ
ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಸುರಲ್ ಸಿಮಾರ್ ಕಾ ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ

ಇಂದೋರ್: ಹಿಂದಿ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಸಸುರಲ್ ಸಿಮಾರ್ ಕಾ ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ 26 ವರ್ಷದ ನಟಿಯ ಅಕಾಲಿಕ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಇಂದೋರ್ನ ಸಹಾಯಕ ಪೊಲೀಸ್ ಕಮಿಷನರ್ ಎಂ ರೆಹಮಾನ್ ಅವರು ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ನಟಿ ಒತ್ತಡಕ್ಕೊಳಗಾಗಿದ್ದಳು ಮತ್ತು ಮಾಜಿ ಗೆಳೆಯನಿಂದ ಕಿರುಕುಳಕ್ಕೊಳಗಾಗಿದ್ದಳು ಎಂದು ಡೆತ್ ನೋಟ್ ನಲ್ಲಿರುವುದಾಗಿ ತಿಳಿದುಬಂದಿದೆ.
ವೈಶಾಲಿ ಟಕ್ಕರ್ ಅವರು 2015 ರಲ್ಲಿ ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಸೀರಿಯಲ್ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ಅವರು ಇತ್ತೀಚೆಗೆ ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಮಲ್ಕಾನಿ ಅವರೊಂದಿಗೆ ‘ರಕ್ಷಾಬಂಧನ್’ ನಲ್ಲಿ ಕಾಣಿಸಿಕೊಂಡಿದ್ದರು.
ಮೂಲತಃ ಉಜ್ಜಯಿನಿಯ ಮಹಿದ್ಪುರದವರಾದ ವೈಶಾಲಿ ಚಲನಚಿತ್ರೋದ್ಯಮದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಮುಂಬೈಗೆ ತೆರಳಿದ್ದರು. ನಂತರ ಜೈಪುರದಿಂದ ಅಂತಿಮವಾಗಿ ಇಂದೋರ್ನ ತೇಜಾಜಿ ನಗರ ಪೊಲೀಸ್ ಠಾಣೆಯ ಸಾಯಿ ಬಾಗ್ ಕಾಲೋನಿಗೆ ವಾಪಸ್ ಆಗಿದ್ದರು. ಅಲ್ಲಿ ಅವರು ಕಳೆದ ವರ್ಷದಿಂದ ತನ್ನ ಕಿರಿಯ ಸಹೋದರ ಮತ್ತು ತಂದೆಯೊಂದಿಗೆ ನೆಲೆಸಿದ್ದರು.
ಇಂದು ಬೆಳಗ್ಗೆ ವೈಶಾಲಿ ಟಕ್ಕರ್ ತಮ್ಮ ಕೊಠಡಿಯಿಂದ ಹೊರಗೆ ಬಾರದೆ ಇದ್ದಾಗ ಆಕೆಯ ತಂದೆ ಒಳಗೆ ಹೋಗಿ ನೋಡಿದಾಗ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಆಕೆಯ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


