ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿ ಬಂಧನ
ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದೋರ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಆರೋಪಿ ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು ಇತರ ಸಾಧನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಈ ಹಿಂದೆ, 'ಸಸುರಲ್ ಸಿಮಾರ್ ಕಾ' ಧಾರಾವಾಹಿಯಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ವೈಶಾಲಿ ಠಕ್ಕರ್ (29) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ರಾಹುಲ್ ನವ್ಲಾನಿ ಮತ್ತು ಆತನ ಪತ್ನಿ ದಿಶಾ ಬಗ್ಗೆ ಮಾಹಿತಿ ನೀಡಿದವರಿಗೆ 5,000 ರೂಪಾಯಿ ಬಹುಮಾನ ನೀಡುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಘೋಷಿಸಿದ್ದರು.
ದಂಪತಿ ಹೆಸರಿನಲ್ಲಿ ಲುಕ್‌ಔಟ್ ನೋಟಿಸ್ ಅನ್ನು ಹೊರಡಿಸಲಾಗಿದೆ.
ಆರೋಪಿ ದಂಪತಿ ವೈಶಾಲಿ ಠಕ್ಕರ್ ಅವರ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಪ್ರದೇಶದ ಇಂದೋರ್ ನಗರದ ಸಾಯಿಬಾಗ್ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆಯಾಗಿತ್ತು.
ಠಕ್ಕರ್ ಅವರಿಗೆ ಕಿರುಕುಳ ನೀಡಿದ್ದಕ್ಕಾಗಿ ರಾಹುಲ್ ನವ್ಲಾನಿ ಎಂದು ಹೆಸರಿಸಿರುವ ಐದು ಪುಟಗಳ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು.
'ಪೊಲೀಸ್ ತಂಡಗಳು ದಂಪತಿಗಾಗಿ ಹುಡುಕುತ್ತಿದ್ದವು. ರಾಹುಲ್ ಇಂದೋರ್‌ನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆಯೇ ಆತನನ್ನು ಬಂಧಿಸಲಾಗಿದೆ. ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ' ಎಂದು ತೇಜಾಜಿ ನಗರ ಪೊಲೀಸ್ ಠಾಣೆಯ ಪ್ರಭಾರಿ ಆರ್ ಡಿ ಕಣ್ವಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅವರ ಪತ್ನಿಯನ್ನು ಸಹ ಬಂಧಿಸಲಾಗಿದೆಯೇ ಎಂದು ಕೇಳಿದಾಗ, ತನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ಕಣ್ವ ಹೇಳಿದರು.
ಬಂಧಿತ ಆರೋಪಿಯಿಂದ ವಶಪಡಿಸಿಕೊಂಡ ಗ್ಯಾಜೆಟ್‌ಗಳಿಂದ ಪೊಲೀಸರು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಮಾಹಿತಿಯನ್ನು ವಿಶ್ಲೇಷಿಸಿ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಮಿಶ್ರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


