ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣ: ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಜರು
ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ನವದೆಹಲಿ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಶ್ರೀಲಂಕಾದ ಪ್ರಜೆಯಾಗಿರುವ ಬಾಲಿವುಡ್ ನಟಿ ಫೆರ್ನಾಂಡಿಸ್ ಮೂರನೇ ಸಮನ್ಸ್ ನೀಡಿದ ನಂತರ ತನಿಖೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿ ಸುಕೇಶ್ ಚಂದ್ರಶೇಖರ್ ಗೆ ನಟಿಯನ್ನು ಪರಿಚಯಿಸಿದ ನಟ ಪಿಂಕಿ ಇರಾನಿ ಇಂದು ವಿಚಾರಣೆಗೆ ಆಗಮಿಸುವ ವೇಳೆ ಜೊತೆಗಿದ್ದರು. ಮೊನ್ನೆ ಸೋಮವಾರ ಜಾಕ್ವೆಲಿನ್ ಫರ್ನಾಂಡೀಸ್ ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು, ಆದರೆ ಪೂರ್ವನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಮಯ ಕೇಳಿದ್ದರು.
ಈ ತಿಂಗಳ ಆರಂಭದಲ್ಲಿ, ಮತ್ತೊಬ್ಬ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ಏಜೆನ್ಸಿಯು ಆರರಿಂದ ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿತ್ತು.
ಇದನ್ನೂ ಓದಿ: ಆರೋಪಿ ಸುಖೇಶ್ ಕಳ್ಳಾಟ ಗೊತ್ತಿದ್ದರೂ, ಆತನಿಂದ ಜಾಕ್ವೆಲಿನ್ ಉಡುಗೊರೆಗಳ ಸ್ವೀಕರಿಸಿದ್ದರು: ಜಾರಿ ನಿರ್ದೇಶನಾಲಯ
ಪ್ರಸ್ತುತ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಂತಹ ಉನ್ನತ ವ್ಯಕ್ತಿಗಳು ಸೇರಿದಂತೆ ಹಲವರನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ನಟಿ ಫತೇಹಿಯನ್ನು ಈ ಹಿಂದೆ ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿತ್ತು.
ಕಳೆದ ಆಗಸ್ಟ್ 17 ರಂದು, ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿ ಇಡಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇಡಿ ಪ್ರಕಾರ, ಫತೇಹಿ ಮತ್ತು ಫೆರ್ನಾಂಡಿಸ್ ಚಂದ್ರಶೇಖರ್ ನಿಂದ ಐಷಾರಾಮಿ ಕಾರುಗಳು ಮತ್ತು ಇತರ ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


