ಬಾಲಿವುಡ್

ಶೂಟಿಂಗ್ ಮುಗಿಸಿ ಮನೆಗೆ ತೆರಳುವ ವೇಳೆ ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

‘ವೆಲ್​ಕಮ್​ ಟು ದಿ ಜಂಗಲ್’ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ ಅವರು ಮನೆಗೆ ತೆರಳುವ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಶೂಟಿಂಗ್ ಮುಗಿಸಿ ಮನೆಗೆ ತೆರಳುವ ವೇಳೆ ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಶ್ರೇಯಸ್ ತಲ್ಪಡೆ
Published On :

ಮುಂಬೈ: ಬಾಲಿವುಡ್‌ ನಟ ಶ್ರೇಯಸ್ ತಲ್ಪಡೆ ಅವರಿಗೆ ಹೃದಯಾಘಾತವಾಗಿದ್ದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

‘ವೆಲ್​ಕಮ್​ ಟು ದಿ ಜಂಗಲ್’ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ ಅವರು ಮನೆಗೆ ತೆರಳುವ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಲಘು ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ತಲ್ಪಡೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ನಿನ್ನೆ ರಾತ್ರಿ 10 ಗಂಟಗೆ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೇಯಸ್ ತಲ್ಪಡೆ ಅವರು 2002ರಲ್ಲಿ ಬಾಲಿವುಡ್‌ ಸಿನಿಮಾರಂಗಕ್ಕೆ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. 2007ರಲ್ಲಿ ತೆರೆಕಂಡ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಸೇರಿದಂತೆ ಹಲವು ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ. ಕೆಲವೇ ದಿನಗಳಲ್ಲೇ ನಟ ಆಸ್ಪತ್ರೆಯಿಂದ ಮನೆಗೆ ವಾಪಸಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.