ಧಾರ್ಮಿಕ ಭಾವನೆಗೆ ಧಕ್ಕೆ: ಬಾಲಿವುಡ್ ನಟ ರಣಬೀರ್ ಕಪೂರ್ ವಿರುದ್ಧ ದೂರು
ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿ ಕ್ರಿಸ್‌ಮಸ್ ಆಚರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.

ಮುಂಬೈ: ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿ ಕ್ರಿಸ್‌ಮಸ್ ಆಚರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಾಗಿಲ್ಲ.
ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಅವರ ಮೂಲಕ ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂಜಯ್ ತಿವಾರಿ, ವಿಡಿಯೋದಲ್ಲಿ ನಟ ರಣಬೀರ್ ಕಪೂರ್ ಅವರು "ಜೈ ಮಾತಾ ದಿ" ಎಂದು ಹೇಳುವಾಗ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ. ಆದರೆ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಉದ್ದೇಶಪೂರ್ವಕವಾಗಿ ಮತ್ತೊಂದು ಧರ್ಮದ ಹಬ್ಬವನ್ನು ಆಚರಿಸುವಾಗ ಮದ್ಯ ಬಳಸಿರುವುದು ಮತ್ತು "ಜೈ ಮಾತಾ ದಿ" ಎಂದು ಘೋಷಣೆ ಕೂಗುವ ಮೂಲದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


