ಕಾಶ್ಮೀರಿ ಹಿಂದೂ ನರಮೇಧದ ದಿನದಂದು ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಮತ್ತೆ ಬಿಡುಗಡೆ!
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ ಎಂದು ಚಿತ್ರತಂಡ ಬುಧವಾರ ಘೋಷಿಸಿದೆ.

ಮುಂಬೈ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಜನವರಿ 19 ರಂದು ಮತ್ತೆ ಥಿಯೇಟರ್‌ಗಳಲ್ಲಿ ಬಿಡಗಡೆಯಾಗಲಿದೆ ಎಂದು ಚಿತ್ರತಂಡ ಬುಧವಾರ ಘೋಷಿಸಿದೆ.
2022 ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳಲ್ಲಿ ಒಂದಾಗಿರುವ ಈ ಚಿತ್ರವು ಕಾಶ್ಮೀರಿ ಹಿಂದೂ ನರಮೇಧದ ದಿನದಂದು ಮತ್ತೆ ಬಿಡುಗಡೆಯಾಗಲಿದೆ.
'ದಿ ಕಾಶ್ಮೀರ ಫೈಲ್ಸ್ ಕಾಶ್ಮೀರಿ ಹಿಂದೂ ನರಮೇಧದ ದಿನವಾದ ಜನವರಿ 19 ರಂದು ಮತ್ತೆ ಬಿಡುಗಡೆಯಾಗುತ್ತಿದೆ. ವರ್ಷಕ್ಕೆ ಎರಡು ಬಾರಿ ಚಿತ್ರ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ನೀವು ಅದನ್ನು ಬಿಗ್ ಸ್ಕ್ರೀನ್‌ನಲ್ಲಿ ವೀಕ್ಷಿಸುವುದನ್ನು ತಪ್ಪಿಸಿಕೊಂಡಿದ್ದರೆ, ಈಗಲೇ ನಿಮ್ಮ ಟಿಕೆಟ್‌ಗಳನ್ನು ಬುಕ್ ಮಾಡಿ' ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.
ಅಗ್ನಿಹೋತ್ರಿ ಬರೆದು ನಿರ್ದೇಶಿಸಿದ ಮತ್ತು ಜೀ ಸ್ಟುಡಿಯೋಸ್ ನಿರ್ಮಿಸಿದ ಈ ಚಲನಚಿತ್ರವು ಭಯೋತ್ಪಾದಕರಿಂದ ಸಮುದಾಯದ ಜನರ ಹತ್ಯೆಯ ನಂತರ ಕಾಶ್ಮೀರದಿಂದ ಕಾಶ್ಮೀರಿ ಹಿಂದೂಗಳ ವಲಸೆಯನ್ನು ಚಿತ್ರಿಸುತ್ತದೆ.
ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್: 1ನೇ ದಿನ ಕಲೆಕ್ಷನ್ ನೋಡಿ ಹೀನಾಯವಾಗಿ ಸೋಲುತ್ತೆ ಅಂದಿದ್ರು; ಆದರೆ 7ನೇ ದಿನಕ್ಕೆ 100 ಕೋಟಿ ರೂ. ಬಾಚಿದೆ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಅವರು ಜೀ ಸ್ಟುಡಿಯೋಸ್ ಸಹಯೋಗದೊಂದಿಗೆ ನಿರ್ಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


