ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದು ಏಕೆ? ಕೊನೆಗೂ ಮೌನ ಮುರಿದ ನಟಿ ಪ್ರಿಯಾಂಕಾ ಚೋಪ್ರಾ!
ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದರು. ಈ ಮೂಲಕ ಅವರು ಮಗಳನ್ನು ಪಡೆದಿದ್ದರು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿದ್ದವು.

ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದರು. ಈ ಮೂಲಕ ಅವರು ಮಗಳನ್ನು ಪಡೆದಿದ್ದರು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿದ್ದವು.
ಪ್ರಿಯಾಂಕಾ –ನಿಕ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ನಿರ್ಧರಿಸಿದ್ದು ಯಾಕೆ ಎಂಬುದರ ಕುರಿತು ಪರ ವಿರೋಧ ಚರ್ಚೆಗಳು ನಡೆದಿದ್ದವು. ಆದರೆ, ಈ ಕುರಿತು ದಂಪತಿ ಬಹಿರಂಗ ಪ್ರತಿಕ್ರಿಯೆ ನೀಡಿರಲಿಲ್ಲ.
ಇದೀಗ ಬಾಡಿಗೆ ತಾಯ್ತನದ ವಿಚಾರವಾಗಿ ಮೌನ ಮುರಿದಿರುವ ಪ್ರಿಯಾಂಕಾ, ಜನರ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರಿಯಾಂಕಾ, ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಉತ್ತರಿಸಿದ್ದಾರೆ.
‘ಮಾಲತಿ ಮೇರಿ ಜನಿಸುವಾಗ ನಾನು ಆಪರೇಷನ್ ರೂಂನಲ್ಲಿ ಇದ್ದೆ. ಅವಳು ತುಂಬಾನೇ ಚಿಕ್ಕವಳಾಗಿದ್ದಳು. ನನ್ನ ಕೈಗಿಂತ ಚಿಕ್ಕವಳಿದ್ದಳು. ಮನೆಗೆ ಕರೆತರುವುದಕ್ಕೂ ಮುನ್ನ ಅವಳನ್ನು ನಾವು ಆಸ್ಪತ್ರೆಯಲ್ಲಿ ನೋಡಿಕೊಂಡಿದ್ದೇವೆ. ನಿತ್ಯ ನಾವು ಆಸ್ಪತ್ರೆಗೆ ತೆರಳುತ್ತಿದ್ದೆವು’ ಎಂದು ಹೇಳಿಕೊಂಡಿದ್ದಾರೆ.
ನಟಿ ತಮಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ಗರ್ಭಿಣಿಯಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದಳು. ನನಗೆ ಆರೋಗ್ಯ ಸಮಸ್ಯೆ ಇತ್ತು. ನಮ್ಮ ಮಗುವಿನ ಬಾಡಿಗೆ ತಾಯಿ ತುಂಬಾ ದಯೆ ಉಳ್ಳವರೂ, ಸುಂದರಿಯೂ ತಮಾಷೆಯ ಮನೋಭಾವದವರಾಗಿದ್ದರು. ಅವರು ಆರು ತಿಂಗಳ ಕಾಲ ನಮ್ಮ ಈ ಅಮೂಲ್ಯ ಉಡುಗೊರೆಯನ್ನು ನೋಡಿಕೊಂಡರು ಎಂದಿದ್ದಾರೆ.
ಆದರೆ ತಮಗಿರುವ ಆರೋಗ್ಯದ ಸಮಸ್ಯೆಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಜನರ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ. ಪ್ರಿಯಾಂಕಾ– ನಿಕ್ ದಂಪತಿ ಮಗಳಿಗೆ ‘ಮಾಲತಿ ಮೇರಿ’ ಎಂದು ಹೆಸರಿಟ್ಟಿದ್ದಾರೆ. ಈ ಮಗು ನಿಗದಿತ ಅವಧಿಗಿಂತ ಮೂರು ತಿಂಗಳು ಮೊದಲೇ ಜನಿಸಿತ್ತು ಎಂದು ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಈ ವಿಚಾರವನ್ನು ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


