ಕರಣ್ ಜೋಹರ್ ಗೆ ಬ್ರಿಟನ್ ಸಂಸತ್ ಗೌರವ; ನನ್ನ ಅದೃಷ್ಟ ಎಂದ ಬಾಲಿವುಡ್ ನಿರ್ದೇಶಕ
ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಮನರಂಜನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರನ್ನು ಬ್ರಿಟಿಷ್ ಸಂಸತ್ತು ಗೌರವಿಸಿದೆ.

ಲಂಡನ್: ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಮನರಂಜನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರನ್ನು ಬ್ರಿಟಿಷ್ ಸಂಸತ್ತು ಗೌರವಿಸಿದೆ.
ಈ ವಿಷಯವನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹಂಚಿಕೊಂಡಿರುವ ಕರಣ್ ಜೋಹರ್ ಅವರು, ಇಂದು ನನಗೆ ವಿಶೇಷ ದಿನ. ಲಂಡನ್ ನಲ್ಲಿರುವ ಬ್ರಿಟಿಷ್ ಹೌಸ್ ಆಫ್ ಪಾರ್ಲಿಮೆಂಟ್ ನಲ್ಲಿ ಗೌರವಾನ್ವಿತಾ ಬ್ಯಾರನೆಸ್ ಸ್ಯಾಂಡಿ ವರ್ಮಾ ಅವರಿಂದ ಗೌರವಿಸಲ್ಪಟ್ಟಿರುವುದು ನನ್ನ ಅದೃಷ್ಟ. ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇದೇ ದಿನ ಅವರ ದೀರ್ಘಕಾಲದ ಸ್ನೇಹಿತ ಮತ್ತು ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಕರಣ್ ಜೋಹರ್ ನಿರ್ದೇಶನದ "ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ" ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ.
ನಾನು ಚಿತ್ರೋದ್ಯಮದಲ್ಲಿ ನಿರ್ದೇಶಕನಾಗಿ 25ನೇ ವರ್ಷ ಆಚರಿಸಿದ್ದೇವೆ ಮತ್ತು ನಾನು "ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ" ಚಿತ್ರದ ಟೀಸರ್ ಅನ್ನು ಸಹ ಬಿಡುಗಡೆ ಮಾಡಿದ್ದೇನೆ! ಎಂದು 51 ವರ್ಷದ ಬಾಲಿವುಡ್ ನಿರ್ದೇಶಕ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


