'ಆದಿಪುರುಷ'ನಿಗೆ ಸಂಕಟ: ಚಿತ್ರಮಂದಿರಗಳಲ್ಲಿ ಪ್ರದರ್ಶನ ಹೆಚ್ಚಿಸಿಕೊಂಡ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್'
ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ 'ಆದಿಪುರುಷ' ಬಾಕ್ಸ್ ಆಫೀಸ್ ಕಲೆಕ್ಷನ್ ಕುಸಿದ ನಂತರ, ಅನಿಮೇಟೆಡ್ ಚಿತ್ರ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್' ಭಾರತದ ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ.

ಮುಂಬೈ: ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ 'ಆದಿಪುರುಷ' ಬಾಕ್ಸ್ ಆಫೀಸ್ ಕಲೆಕ್ಷನ್ ಕುಸಿದ ನಂತರ, ಅನಿಮೇಟೆಡ್ ಚಿತ್ರ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್' ಭಾರತದ ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ.
ಈ ಚಿತ್ರ ಬಿಡುಗಡೆಯಾದ ನಾಲ್ಕನೇ ವಾರದಲ್ಲಿ ಚಿತ್ರಮಂದಿರಗಳ ಪ್ರದರ್ಶನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 50 ಕೋಟಿ ರೂ ಕ್ಲಬ್ ಸೇರಿದೆ. ಈ ಚಿತ್ರ ಭಾರತದಲ್ಲಿ ಮೂರು ವಾರಗಳಲ್ಲಿ 50 ಕೋಟಿ ರೂ. ಬಾಚಿದರೆ ಜಾಗತಿಕವಾಗಿ 500 ಮಿಲಿಯನ್ ಡಾಲರ್ ಗಳಿಸಿದೆ.
ನಾಲ್ಕನೇ ವಾರದಲ್ಲಿ ಥಿಯೇಟರ್ ಗಳು ಪ್ರದರ್ಶನಗಳನ್ನು ದ್ವಿಗುಣಗೊಳಿಸಿವೆ. IMAX ಮತ್ತು 4DX ಗಳಲ್ಲೂ ಪ್ರದರ್ಶನ ಹೆಚ್ಚಾಗಿದೆ. ಆದಿ ಪುರುಷ ಹಿಂದಿ ವರ್ಸನ್ ಮೊದಲ ದಿನ ರೂ. 37 ಕೋಟಿ ರೂ. ಗಳಿಸಿತ್ತು. ಬಿಡುಗಡೆಯಾದ ಆರನೇ ದಿನದಲ್ಲಿ ಎಲ್ಲಾ ಭಾರತೀಯ ಭಾಷೆಗಳಲ್ಲಿ ಕೇವಲ 7 ಕೋಟಿ ರೂ. ಕಲೆಕ್ಷನ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


