ಬಾಲಿವುಡ್

ಅಭಿಮಾನಿಗಳ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಚೇತರಿಕೆ: ಅಮಿತಾಬ್ ಬಚ್ಚನ್

ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಅಭಿಮಾನಿಗಳ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಚೇತರಿಕೆ: ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್
Published On :

ಮುಂಬೈ: ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಆಕ್ಷನ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾಗ ಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿಷಯವನ್ನು ಸ್ವತಃ ಬಚ್ಚನ್ ಅವರೇ ತಮ್ಮ ಬ್ಲಾಗ್‍ನಲ್ಲಿ ಭಾನುವಾರ ಬರೆದುಕೊಂಡಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ವಿಶ್ರಾಂತಿ ಪಡೆಯುತ್ತಿರುವುದರಿಂದ ಅಭಿಮಾನಿಗಳು ನಮ್ಮ ಮನೆ ಬಳಿಗೆ ಬರದೆ ಸಹಕರಿಸಬೇಕು ಎಂದು ಬಿಗ್‍ಬಿ ಮನವಿ ಮಾಡಿಕೊಂಡಿದ್ದರು. 

ಇಂದು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ನಿಮ್ಮ ಕಾಳಜಿ, ಹಾರೈಕೆಗಳಿಗೆ ಧನ್ಯವಾದಗಳು,  ನಿಮ್ಮ ಪ್ರಾರ್ಥನೆಯೇ ಪರಿಹಾರ, ನಾನು ವಿಶ್ರಾಂತಿಯಲ್ಲಿದ್ದು, ನಿಮ್ಮ ಪ್ರಾರ್ಥನೆಯೊಂದಿಗೆ ಚೇತರಿಸಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.  

ಹೈದ್ರಾಬಾದ್ ಮೂಲದ ಆಸ್ಪತ್ರೆಯೊಂದರಲ್ಲಿ ಸಿಟಿ ಸ್ಕ್ಯಾನ್ ಗೆ ಒಳಗಾದ ನಂತರ ವಿಶ್ರಾಂತಿ ಪಡೆಯುವಂತೆ ವೈದ್ಯರು ಅಮಿತಾಬ್ ಬಚ್ಚನ್ ಅವರಿಗೆ ಸಲಹೆ ನೀಡ್ದ್ದು, ಮುಂಬೈನಲ್ಲಿರುವ ತಮ್ಮ ಜಲ್ಸಾ ನಿವಾಸದಲ್ಲಿ ಅಮಿತಾಬ್ ಬಚ್ಚನ್ ವಿಶ್ರಾಂತಿ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.